ADVERTISEMENT

ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 17:08 IST
Last Updated 6 ಸೆಪ್ಟೆಂಬರ್ 2021, 17:08 IST

ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನನಿತ್ಯ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ, ಸೋಂಕು ನಿಯಂತ್ರಿಸಲು ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೋವಿಡ್-19 ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.

ಎಲ್ಲ ನಗರ ಆರೋಗ್ಯ ಕೇಂದ್ರಗಳಲ್ಲಿ ಸಂಜೆಯ ವೇಳೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಸಾರ್ವಜನಿಕರು, ಕಾರ್ಮಿಕರು ಇದರ ಉಪಯೋಗ ಪಡೆಯುವಂತೆ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಆಹ್ವಾನ

ADVERTISEMENT

ಮಂಗಳೂರು: ಜಿಲ್ಲೆಯ ಮಂಗಳೂರು, ಪುತ್ತೂರು, ಸುಳ್ಯ, ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕುಗಳಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ಸಮೀಕ್ಷೆ ನಡೆಸಲು ಈಗಾಗಲೇ ಬಾಲಕಾರ್ಮಿಕ ಸಮೀಕ್ಷೆ ನಡೆಸಿದ ಅಥವಾ ಮಕ್ಕಳ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವವಿರುವ ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದೇ 10ರ ಒಳಗೆ ಪ್ರಸ್ತಾವ ಸಲ್ಲಿಸಬೇಕು. ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ, ಕಾರ್ಮಿಕ ಭವನ, ಪದುವ ಹೈಸ್ಕೂಲ್ ರಸ್ತೆ, ಕೊಂಚಾಡಿ ಮಂಗಳೂರು– 575008 (824-2433131) ಈ ವಿಳಾಸ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.