ADVERTISEMENT

ಹಿಂದೂ ಮಹಾಸಭಾದ ಧರ್ಮೇಂದ್ರ ಪೊಲೀಸ್ ಕಸ್ಟಡಿಗೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 3:46 IST
Last Updated 22 ಸೆಪ್ಟೆಂಬರ್ 2021, 3:46 IST

ಮಂಗಳೂರು: ‘ಹಿಂದೂ ವಿರೋಧಿ ವಿಚಾರ ಬಂದಾಗ ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ.ನೀವು ಯಾವ ಲೆಕ್ಕ?’ ಎಂದು ಮುಖ್ಯಮಂತ್ರಿ ವಿರುದ್ಧ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದಪ್ರಧಾನ ಕಾರ್ಯದರ್ಶಿ ಧರ್ಮೇಂದ್ರನನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಇತರ ಮೂವರನ್ನು ಮಂಗಳವಾರ ಬಂಧಿಸಲಾಗಿದೆ.

ಮೈಸೂರಿನಲ್ಲಿ ದೇಗುಲ ತೆರವು ವಿಷಯಕ್ಕೆ ಸಂಬಂಧಿಸಿದಂತೆ ಶನಿವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಧರ್ಮೇಂದ್ರ, ‘ನಿಮ್ಮ (ಮುಖ್ಯಮಂತ್ರಿ) ವಿಚಾರದಲ್ಲಿ ನಾವು ಆಲೋಚನೆ ಮಾಡಲು ಸಾಧ್ಯವಿಲ್ಲ ಎನ್ನುತ್ತೀರಾ’ ಎಂದು ಪ್ರಶ್ನಿಸಿದ್ದರು.

ಧರ್ಮೇಂದ್ರಗೆ ಸೆ.22ರವರೆಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ. ರಾಜೇಶ್ ಪವಿತ್ರನ್, ಪ್ರೇಮ್ ಶೆಟ್ಟಿ ಪೊಳಲಿ ಹಾಗೂ ಸಂದೀಪ್ ಶೆಟ್ಟಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇವರಿಗೆ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.