ADVERTISEMENT

ಮಂಗಳೂರು ನಗರದಲ್ಲಿ ಬೃಹತ್‌ ಉದ್ಯೋಗ ಮೇಳ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2022, 16:04 IST
Last Updated 1 ಮಾರ್ಚ್ 2022, 16:04 IST
   

ಮಂಗಳೂರು: ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತಗಳ ಸಹಯೋಗದಲ್ಲಿ ಬೃಹತ್‌ ಉದ್ಯೋಗ ಮೇಳವನ್ನು ಮಾ.3ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಗೋಲ್ಡ್ ಪಿಂಚ್ ಸಿಟಿ ಮೈದಾನದ ಎದುರಿಸನ ಎಜೆ ಎಂಜಿನಿಯರಿಂಗ್ ಕಾಲೇಜಿನಲ್ಲಆಯೋಜಿಸಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ಟೀಮ್ ಲೀಸ್, ಸಿನೋಪ್ ಟೆಕ್, ಎಚ್‌ಜಿಎಸ್, ಬಿಒಎಸ್‌ಸಿಎಚ್, ಬೈಜೂಸ್, ಟಾಟಾ ಕಮ್ಯುನಿಕೇಷನ್ಸ್, ಟೊಯೊಟಾ ಕಿರ್ಲೋಸ್ಕರ್ ಮೋಟಾರ್, ಎನ್‌ಟಿಟಿಎಫ್ ಸೇರಿದಂತೆ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.

ಬಿಎ, ಬಿ.ಎಸ್ಸಿ, ಬಿಕಾಂ, ಐಟಿಐ, ಡಿಪ್ಲೊಮಾ, ಬಿಇ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ADVERTISEMENT

ಒಬ್ಬ ಅಭ್ಯರ್ಥಿಗೆ ಗರಿಷ್ಠ 3 ಕಂಪನಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ವಿದ್ಯಾರ್ಹತೆಗೆ ಸರಿಹೊಂದುವ 3 ಕಂಪನಿಗಳನ್ನು ಆಯ್ಕೆಮಾಡಿ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು www.skillconnet.kaushalkar.com ಇಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮಹಾನಗರ ಪಾಲಿಕೆಯ ಶಾಸಕ ವೇದವ್ಯಾಸ್ ಕಾಮತ್ ಅವರ ಕಚೇರಿಗೆ ಭೇಟಿ ನೀಡಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.