ADVERTISEMENT

ಮಂಗಳೂರು: ದೋಣಿ ಅಪಘಾತ; ಮೀನುಗಾರ ನೀರುಪಾಲು

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2021, 5:34 IST
Last Updated 11 ಸೆಪ್ಟೆಂಬರ್ 2021, 5:34 IST
ಅಪಘಾತಕ್ಕೀಡಾಗಿದ್ದ ದೋಣಿ
ಅಪಘಾತಕ್ಕೀಡಾಗಿದ್ದ ದೋಣಿ   

ಮಂಗಳೂರು: ಪಣಂಬೂರು ಸಮುದ್ರ ತೀರದಲ್ಲಿ ದೋಣಿಯೊಂದು ಅಪಘಾತಕ್ಕೀಡಾಗಿದ್ದು, ಮೀನುಗಾರ ನೀರು ಪಾಲಾಗಿದ್ದಾರೆ.

ಅಝರ್ ಮಾಲೀಕತ್ವದ ಗಿಲ್ ನೆಟ್ ಬೋಟ್ ಇದಾಗಿದ್ದು, ಅವಘಡ ಸಂಭವಿಸಿ ನೀರುಪಾಲಾಗಿದ್ದ ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ಎಂಬ ನಾಲ್ವರು ಮೀನುಗಾರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಈ ಪೈಕಿ ಒಬ್ಬ ನಾಪತ್ತೆಯಾಗಿದ್ದು ಆತನನ್ನು ಶರೀಫ್ ಎಂದು ಗುರುತಿಸಲಾಗಿದೆ. ಸದ್ಯ ದೋಣಿಯನ್ನು ದಡಕ್ಕೆ ತರಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.