ADVERTISEMENT

₹13.88 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 12:44 IST
Last Updated 21 ಸೆಪ್ಟೆಂಬರ್ 2021, 12:44 IST

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮತ್ತೊಂದು ಚಿನ್ನಅಕ್ರಮ ಸಾಗಾಟ ಪ್ರಕರಣ ಪತ್ತೆಯಾಗಿದೆ.

ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಬಂದಿಳಿದ ಕಾಸರಗೋಡಿನ ಪ್ರಯಾಣಿಕನ ಬಳಿ ₹13.88 ಲಕ್ಷ ಮೌಲ್ಯದ 293 ಗ್ರಾಂ ಚಿನ್ನ ವಶಪಡಿಸಿಕೊಂಡಿರುವುದಾಗಿಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಪ್ಪು ಬಣ್ಣದ ಬಟ್ಟೆಯೊಳಗೆ ಹಾಗೂ ಬ್ಲಾಂಕೆಟ್‌ನೊಳಗಿಟ್ಟು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.