ADVERTISEMENT

ಕದ್ರಿ ಗೋಪಾಲನಾಥ್ ಪಾರ್ಥಿವ ಶರೀರದ ಅಂತಿಮ ಯಾತ್ರೆ, ದರ್ಶನ ಪಡೆದ ಗಣ್ಯರು

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 7:17 IST
Last Updated 14 ಅಕ್ಟೋಬರ್ 2019, 7:17 IST
ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನಮನ ಸಲ್ಲಿಸಿದರು.
ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನಮನ ಸಲ್ಲಿಸಿದರು.   

ಮಂಗಳೂರು: ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆಯು ಸೋಮವಾರ ಪದವಿನಂಗಡಿ ದೇವಿಕಟ್ಟೆಯ ನಿವಾಸದಿಂದ ಮಂಗಳೂರು ಮಿನಿ ಪುರಭವನ ತಲುಪಿದ್ದು,ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಸಂಗೀತಪ್ರೇಮಿಗಳು ಭಾಗವಹಿಸಿದ್ದಾರೆ.

ಪಂಡಿತ್ ನರಸಿಂಹಲು ವಡವಾಟಿ, ರಾಜೇಂದ್ರ ನಾಕೋಡ್, ಬೆಂಗಳೂರು ರಾಜಶೇಖರ್ ಸೇರಿದಂತೆ ಹಲವು ಮಂದಿ ಸಂಗೀತ ಕಲಾವಿದರು ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ಸಲ್ಲಿಸಿದರು. ಈ ಮೂವರೂ ಕಲಾವಿದರು ಗೋಪಾಲನಾಥ್ ಅವರೊಂದಿಗೆ ಹೆಚ್ಚಿನ ಸಂಗೀತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ನಮನ ಸಲ್ಲಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಇತರ ಗಣ್ಯರುಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು.

ADVERTISEMENT
ದಿವಂಗತ ಕದ್ರಿ ಗೋಪಾಲನಾಥ್

ಮಿನಿ ಪುರಭವನದಲ್ಲಿ ಇಂದು ಮಧ್ಯಾಹ್ನ 2 ಗಂಟೆಯವರೆಗೆ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಿನಿ ಪುರಭವನದ ವೇದಿಕೆಯಲ್ಲಿ ವಾದ್ಯ ಹಾಗೂ ಸಂಗೀತ ಗೋಷ್ಠಿಯ ‘ಸ್ವರಾಂಜಲಿ’ ಕಾರ್ಯಕ್ರಮವನ್ನು ಕದ್ರಿ ಗೋಪಾಲನಾಥ ಅವರ ಶಿಷ್ಯರು ನಡೆಸಿಕೊಡುತ್ತಿದ್ದಾರೆ.

ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆಯು ಪದವಿನಂಗಡಿ ದೇವಿಕಟ್ಟೆಯ ನಿವಾಸದಿಂದ ಮಂಗಳೂರು ಮಿನಿ ಪುರಭವನದತ್ತ ಹೊರಟಿದೆ.

ಅಂತಿಮ ದರ್ಶನಕ್ಕೆ ಬರುವವರಿಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ವ್ಯವಸ್ಥೆ

ಬಳಿಕ ಮೃತರ ಹುಟ್ಟೂರು ಬಂಟ್ವಾಳದ ಸಜಿಪ ಮೂಡ ಗ್ರಾಮದ ಮಿತ್ತಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಜೋಗಿ ಸಮಾಜದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಪೂರಕ ವ್ಯವಸ್ಥೆಯನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮಾಡಿಕೊಂಡಿದೆ.

ಇನ್ನಷ್ಟು...

ಹುಟ್ಟೂರಲ್ಲಿ ಅ.14ಕ್ಕೆ ಕದ್ರಿ ಗೋಪಾಲನಾಥ್ ಅಂತ್ಯಕ್ರಿಯೆ
ವಿಶೇಷ ಸಂದರ್ಶನ | ಸೈನಿಕರಿಗೆ ಸಂಗೀತ: ಕದ್ರಿ ಕನಸು
ರಾಮನವಮಿ ಸಂಗೀತೋತ್ಸವದಲ್ಲಿ ಇನ್ನು ಕೇಳದು ‘ಕದ್ರಿ‘ ಸ್ಯಾಕ್ಸೋಫೋನ್‌ಇಂಪು
ವ್ಯಕ್ತಿತ್ವ |ಸ್ಯಾಕ್ಸೋಫೋನ್ ಚಕ್ರವರ್ತಿ ‘ಕದ್ರಿ’
ವಿಡಿಯೊ |ಮಂಗಳೂರಿನಲ್ಲಿ ಕದ್ರಿ ಗೋಪಾಲನಾಥ್ ನೀಡಿದ ಕೊನೆಯ ಸಂಗೀತ ಕಾರ್ಯಕ್ರಮ
ಸ್ಯಾಕ್ಸೋಫೋನ್‌ ಚಕ್ರವರ್ತಿ ಕದ್ರಿ ಗೋಪಾಲನಾಥ್‌ ನಿಧನ
ಕದ್ರಿ ಗೋಪಾಲನಾಥ್ ಮನದ ಮಾತು: ಸಂಗೀತಕ್ಕೆ ಜಾತಿ ಇಲ್ಲ
ರಾಮನವಮಿ ಸಂಗೀತೋತ್ಸವದಲ್ಲಿ ಇನ್ನು ಕೇಳದು ‘ಕದ್ರಿ‘ ಸ್ಯಾಕ್ಸೋಫೋನ್‌ಇಂಪು
ಕುವೈತ್‌ನಲ್ಲಿರುವ ಕದ್ರಿ ಗೋಪಾಲನಾಥ್ ಪುತ್ರನಿಗೆ ವೀಸಾ ವ್ಯವಸ್ಥೆ ಮಾಡಿಕೊಡಿ: ಮನವಿ
ಕರ್ನಾಟಕ ಸಂಗೀತಕ್ಕೆ ಬೆಲ್ಜಿಯಂ ವಾದ್ಯ ಸ್ಯಾಕ್ಸೊಫೋನ್ ಒಗ್ಗಿದ ಕಥೆ
ಕದ್ರಿ ಗೋಪಾಲನಾಥ್ ಹೇಳುತ್ತಿದ್ದ ‘ಅಘೋರಿ ಕತೆ’ ಕೇಳಿದ್ದೀರಾ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.