ADVERTISEMENT

‘ಭವಿಷ್ಯದ ಡಿಜಿಟಲ್ ಬ್ಯಾಂಕ್’ನತ್ತ ಹೆಜ್ಜೆ

ಕರ್ಣಾಟಕ ಬ್ಯಾಂಕ್‌ ಎಂಡಿ, ಸಿಇಒ ಮಹಾಬಲೇಶ್ವರ್‌

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 3:54 IST
Last Updated 3 ಸೆಪ್ಟೆಂಬರ್ 2021, 3:54 IST
ಗುರುವಾರ ನಡೆದ ಕರ್ಣಾಟಕ ಬ್ಯಾಂಕಿನ 97ನೇ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್. ಮಾತನಾಡಿದರು. ಅಧ್ಯಕ್ಷ ಪಿ. ಜಯರಾಮ್‌ ಭಟ್‌ ಇದ್ದರು.
ಗುರುವಾರ ನಡೆದ ಕರ್ಣಾಟಕ ಬ್ಯಾಂಕಿನ 97ನೇ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್. ಮಾತನಾಡಿದರು. ಅಧ್ಯಕ್ಷ ಪಿ. ಜಯರಾಮ್‌ ಭಟ್‌ ಇದ್ದರು.   

ಮಂಗಳೂರು: ಕರ್ಣಾಟಕ ಬ್ಯಾಂಕ್ ‘ಭವಿಷ್ಯದ ಡಿಜಿಟಲ್ ಬ್ಯಾಂಕ್’ ಆಗುವತ್ತ ಹೆಜ್ಜೆ ಇಡುತ್ತಿದೆ ಎಂದು ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್. ಹೇಳಿದರು.

ಆನ್‌ಲೈನ್‌ ಮೂಲಕ ಗುರುವಾರ ನಡೆದ ಕರ್ಣಾಟಕ ಬ್ಯಾಂಕಿನ 97ನೇ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಶೇರುದಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಕೆಬಿಎಲ್ ವಿಕಾಸ್' ಎನ್ನುವ ಪರಿವರ್ತನಾ ಜೈತ್ರಯಾತ್ರೆಯ ಮೂಲಕ ಬ್ಯಾಂಕಿನ ತಂತ್ರಜ್ಞಾನದಲ್ಲಿ ಅನೇಕ ಬದಲಾವಣೆಗಳನ್ನು ತರಲಾಗಿದೆ. ‘ಕೆಬಿಎಲ್ ವಿಕಾಸ್’ ಇದರ ಯಶಸ್ಸಿನ ಹಾದಿಯಲ್ಲಿ ವಿಕಸನಗೊಂಡ ‘ಕೆಬಿಎಲ್ ನೆಕ್ಸ್ಟ್’ ಎನ್ನುವ ಪರಿಕಲ್ಪನೆಯಲ್ಲಿ ಸಂಪೂರ್ಣ ಬ್ಯಾಂಕಿಂಗ್ ವ್ಯವಹಾರವನ್ನು ಡಿಜಿಟಲ್ ತಂತ್ರಜ್ಞಾನದ ಮೂಲಕವೇ ನಡೆಸುವತ್ತ ಮುಂದುವರಿಯುತ್ತಿದ್ದೇವೆ. ಈ ಉಪಕ್ರಮಗಳಿಂದಾಗಿ ಕರ್ಣಾಟಕ ಬ್ಯಾಂಕ್ ‘ಭವಿಷ್ಯದ ಡಿಜಿಟಲ್ ಬ್ಯಾಂಕ್' ಆಗಿ ಹೊರಹೊಮ್ಮಲಿದೆ ಎಂದರು.

ADVERTISEMENT

2023-24 ಬ್ಯಾಂಕಿನ ಶತಮಾನೋತ್ಸವದ ವರ್ಷವಾಗಿದ್ದು, ಈ ಸಂಭ್ರಮವನ್ನು ಆಚರಿಸಲು ಅಗತ್ಯವುಳ್ಳ ಎಲ್ಲ ರೀತಿಯ ಪೂರ್ವತಯಾರಿ ಮಾಡಲಾಗುತ್ತಿದೆ. ಅಲ್ಲದೇ ಹೊಸ ಮತ್ತು ದೀರ್ಘಾವಧಿಯ ಉಪಕ್ರಮಗಳ ಮೂಲಕ ಬ್ಯಾಂಕಿನ ಎರಡನೇ ಶತಮಾನಕ್ಕೆ ಬಲವಾದ ಅಡಿಪಾಯವನ್ನು ಹಾಕಲಿದ್ದೇವೆ. ಶೇರುದಾರರ ಮಹಾಸಭೆಯಲ್ಲಿ ಶೇರುದಾರರಿಗೆ ಶೇ 18 ಡಿವಿಡೆಂಡ್ ನೀಡಲು ತೀರ್ಮಾನಿಸಿದೆ’ ಎಂದು ಹೇಳಿದರು. ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಪಿ.ಜಯರಾಮ್ ಭಟ್ ವಹಿಸಿದ್ದರು. ಬ್ಯಾಂಕಿನ ಎಲ್ಲ ನಿರ್ದೇಶಕರು, ಹಿರಿಯ ಅಧಿಕಾರಿಗಳು ಹಾಗೂ ಶೇರುದಾರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.