ADVERTISEMENT

ಕಬಡ್ಡಿ ವಸತಿ ನಿಲಯ: ಕಾಮತ್ ಮನವಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 14:05 IST
Last Updated 21 ಸೆಪ್ಟೆಂಬರ್ 2021, 14:05 IST
ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಂಗಣದಲ್ಲಿ ಕಬಡ್ಡಿಯ ಬಾಲಕ- ಬಾಲಕಿಯರ ಕ್ರೀಡಾ ವಸತಿ ನಿಲಯ ಸ್ಥಾಪಿಸುವಂತೆ ಯುವ‌ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಮಂಗಳವಾರ ಮನವಿ ಸಲ್ಲಿಸಿದರು
ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಂಗಣದಲ್ಲಿ ಕಬಡ್ಡಿಯ ಬಾಲಕ- ಬಾಲಕಿಯರ ಕ್ರೀಡಾ ವಸತಿ ನಿಲಯ ಸ್ಥಾಪಿಸುವಂತೆ ಯುವ‌ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಮಂಗಳವಾರ ಮನವಿ ಸಲ್ಲಿಸಿದರು   

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಂಗಣದಲ್ಲಿ ಕಬಡ್ಡಿಯ ಬಾಲಕ- ಬಾಲಕಿಯರ ಕ್ರೀಡಾ ವಸತಿ ನಿಲಯ ಸ್ಥಾಪಿಸುವಂತೆ ಯುವ‌ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಮಂಗಳವಾರ ಮನವಿ ಸಲ್ಲಿಸಿದರು.

ಅಧಿವೇಶನದ ಸಂದರ್ಭದಲ್ಲಿ ಸಚಿವರನ್ನು ಭೇಟಿಯಾಗಿರುವ ಶಾಸಕ ಕಾಮತ್‌, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಪ್ರತಿಭಾನ್ವಿತ ಕಬಡ್ಡಿ ಪಟುಗಳು ಇದ್ದಾರೆ. ಇವರು ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿ ಕೀರ್ತಿ ತಂದಿದ್ದಾರೆ. ಆದರೆ, ನಮ್ಮ ಜಿಲ್ಲಾ ಕ್ರೀಡಾ ವಸತಿ ನಿಲಯದಲ್ಲಿ ಕಬಡ್ಡಿ ಕ್ರೀಡೆಗೆ ಸಂಬಂಧಿಸಿದಂತೆ ಮಕ್ಕಳ ಸೇರ್ಪಡೆಗೆ ಅವಕಾಶ ಬೇಕಾಗಿದೆ. ಅಲ್ಲದೇ, ಅಗತ್ಯ ತರಬೇತುದಾರರು, ಸೌಲಭ್ಯಗಳನ್ನೂ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT