ADVERTISEMENT

ಮಾರ್ಚ್‌ 25ರಂದು ಬೆಳ್ತಂಗಡಿಯಲ್ಲಿ ‘ಸಾನಿಧ್ಯ ಉತ್ಸವ’ 2023

ಸಾನಿಧ್ಯ ಕೌಶಲ ತರಬೇತಿ ಕೇಂದ್ರ, ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಸಹಯೋಗ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 13:11 IST
Last Updated 21 ಮಾರ್ಚ್ 2023, 13:11 IST
ಪತ್ರಿಕಾಗೋಷ್ಠಿಯಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಮಾತನಾಡಿದರು
ಪತ್ರಿಕಾಗೋಷ್ಠಿಯಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಮಾತನಾಡಿದರು   

ಬೆಳ್ತಂಗಡಿ: ಉಜಿರೆಯ ಸಾನಿಧ್ಯ ಕೌಶಲ ತರಬೇತಿ ಕೇಂದ್ರ ಮತ್ತು ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಇದರ ಆಶ್ರಯದಲ್ಲಿ ಎಂಡೋಸಲ್ಫಾನ್ ಪೀಡಿತ ಹಾಗೂ ಮಾನಸಿಕ ಭಿನ್ನ ಸಾಮರ್ಥ್ಯದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ‘ಸಾನಿಧ್ಯ ಉತ್ಸವ - 2023’ ಮಾರ್ಚ್‌ 25ರಂದು ಬೆಳ್ತಂಗಡಿಯ ಮಾರಿಗುಡಿ ಮೈದಾನದಲ್ಲಿ ನಡೆಯಲಿದೆ ಎಂದು ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಮತ್ತು ಗೌರವ ಸಲಹೆಗಾರ ಪ್ರೇಮರಾಜ್ ರೋಶನ್ ಸಿಕ್ವೇರ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘25ರಂದು ಸಂಜೆ 7ಗಂಟೆಗೆ ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸುವರು. ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ವಸಂತ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಕುಮಾರ್, ಸರ್ಕಲ್ ಇನ್‌ಸ್ಪೆಕ್ಟರ್ ಶಿವಕುಮಾರ್, ಜಿಲ್ಲಾ ಎಂಡೋಸಲ್ಫಾನ್ ಕಾರ್ಯಕ್ರಮ ವ್ಯವಸ್ಥಾಪಕ ಸಾಜುದ್ದೀನ್ ಹಾಗೂ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ ಶೃಂಗೇರಿ ಶಾರದಾ ಅಂಧರ ಗೀತಾ ಗಾಯನ ಕಲಾ ಸಂಘದಿಂದ ರಸಮಂಜರಿ, ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿಯವರ ನಿರ್ದೇಶನ ಮತ್ತು ಶಿಕ್ಷಕರ ನೆರವಿನಿಂದ ಎಂಡೋಸಲ್ಫಾನ್ ಪೀಡಿತ ಹಾಗೂ ಮಾನಸಿಕ ಭಿನ್ನ ಸಾಮರ್ಥ್ಯದ ಮಕ್ಕಳಿಂದ ‘ಕಲ್ಲುರ್ಟಿ ಕಲ್ಕುಡ’ ಎಂಬ ದೈವಾರಾಧನೆ ಹಾಗೂ ಭಕ್ತಿ ಪ್ರಧಾನ ನಾಟಕ ಪ್ರದರ್ಶನ ನಡೆಯಲಿದೆ. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ ನಡೆಯಲಿದೆ. ರಾಜಕೇಸರಿ ಸಂಘಟನೆಯ ಸಂಸ್ಥಾಪಕರ ನೇತೃತ್ವದಲ್ಲಿ 536ನೇ ಸಾಂಸ್ಕೃತಿಕ ಸೇವಾ ಯೋಜನೆಯಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

ADVERTISEMENT

ಗೌರವ ಸಲಹೆಗಾರ ಜಯಪ್ರಕಾಶ್ ಕನ್ಯಾಡಿ, ಸದಸ್ಯರಾದ ಸಂದೇಶ್, ಶಶಿಕಾಂತ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.