ADVERTISEMENT

ನದಿಗೆ ತ್ಯಾಜ್ಯ ನೀರು: ತಡೆಗಟ್ಟಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 17:06 IST
Last Updated 6 ಸೆಪ್ಟೆಂಬರ್ 2021, 17:06 IST
   

ಮಂಗಳೂರು: ಪಚ್ಚನಾಡಿಯ ಘನತ್ಯಾಜ್ಯ ಶೇಖರಣಾ ಪ್ರದೇಶದಿಂದ ಹರಿಯುವ ಕೊಳಚೆ ನೀರು ಫಲ್ಗುಣಿ ನದಿಗೆ ಸೇರಿ ಕಲುಷಿತಗೊಳ್ಳುವುದನ್ನು ತಡೆಯಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಮಹಾನಗರ ಪಾಲಿಕೆ ಸದಸ್ಯ ಎ.ಸಿ. ವಿನಯ್‌ರಾಜ್ ಎಚ್ಚರಿಕೆ ನೀಡಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಕ್ಕೆ ಸಂಗ್ರಹವಾಗುವ 250-300 ಟನ್‍ಗಳಷ್ಟು ತ್ಯಾಜ್ಯವನ್ನು ಪಚ್ಚನಾಡಿ ಡಂಪಿಂಗ್ ಯಾರ್ಡ್‍ನಲ್ಲಿ ಸುರಿಯಲಾಗುತ್ತಿದೆ. ಈ ಪ್ರದೇಶದಲ್ಲಿ ಕಸದ ಕೃತಕ ಗುಡ್ಡ ನಿರ್ಮಾಣವಾಗುತ್ತಿದೆ. ಈ ತ್ಯಾಜ್ಯದಿಂದ ಗೊಬ್ಬರ ಅಥವಾ ಇಂಧನ ಉತ್ಪಾದಿಸುವ ಬಗ್ಗೆ ಪಾಲಿಕೆ ಯೋಚಿಸಿಲ್ಲ. ಕೆಪಿಟಿಸಿಎಲ್ ₹ 150 ಕೋಟಿ ವೆಚ್ಚದಲ್ಲಿ ಪ್ರಸ್ತಾಪಿಸಿದ್ದ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಯನ್ನೂ ಕಡೆಗಣಿಸಲಾಗಿದೆ ಎಂದುಅವರು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಈ ಕಸದ ರಾಶಿಯಿಂದ ಕಲುಷಿತ ನೀರು, ಹತ್ತಿರದಲ್ಲಿಯೇ ಹರಿಯುವ ಫಲ್ಗುಣಿ ನದಿಗೆ ಸೇರಿ, ಮರವೂರು ಕುಡಿಯುವ ನೀರಿನ ಕಿಂಡಿ ಅಣೆಕಟ್ಟೆಯ ನೀರು ಮಲಿನಗೊಳ್ಳುತ್ತಿದೆ. ಇದನ್ನು ಕುಡಿಯುವ 15–20 ಗ್ರಾಮಗಳ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.