
ಪ್ರಜಾವಾಣಿ ವಾರ್ತೆ
ದಾವಣಗೆರೆ:ಜಿಲ್ಲೆಯಲ್ಲಿ ಬುಧವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಸರಾಸರಿ 4.4 ಮಿ.ಮೀ. ಸರಾಸರಿ ಮಳೆಯಾಗಿದೆ.
ಚನ್ನಗಿರಿಯಲ್ಲಿ 8.5 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 5.6 ಮಿ.ಮೀ., ಹರಿಹರದಲ್ಲಿ 3.7 ಮಿ.ಮೀ., ಹೊನ್ನಾಳಿಯಲ್ಲಿ 1.0 ಮಿ.ಮೀ., ಜಗಳೂರಿನಲ್ಲಿ 3.1 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಸರಾಸರಿ 4.4 ಮಿ.ಮೀ ವಾಸ್ತವಮಳೆಯಾಗಿದೆ.
ದಾವಣಗೆರೆ ತಾಲ್ಲೂಕಿನಲ್ಲಿ 1 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ₹ 30 ಸಾವಿರ ನಷ್ಟ ಸಂಭವಿಸಿದೆ. ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.