ADVERTISEMENT

ಪ್ರಾಮಾಣಿಕತೆ ಮೆರೆದ ಆಟೊ ಚಾಲಕ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 2:29 IST
Last Updated 9 ಏಪ್ರಿಲ್ 2021, 2:29 IST
ದಾವಣಗೆರೆಯ ಪಿ.ಜೆ. ಬಡಾವಣೆಯ ರಸ್ತೆಯಲ್ಲಿ ಬಿದ್ದಿದ್ದ ಬಂಗಾರ ಹಾಗೂ ಹಣ ಇದ್ದ ಪರ್ಸ್‌ ಅನ್ನು ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಆಟೊ ಚಾಲಕ ಜಗದೀಶ್ ಆರ್‌.ಟಿ. ಅವರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಅವರು ಗುರುವಾರ ‘ಪ್ರಶಂಸಾ ಪತ್ರ’ ನೀಡಿದರು.

ದಾವಣಗೆರೆ: ಮಾರ್ಚ್‌ 25ರಂದು ನಗರದ ಪಿ.ಜೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಬಿದ್ದಿದ್ದ ಬಂಗಾರ ಹಾಗೂ ಹಣ ಇದ್ದ ಪರ್ಸ್‌ ಅನ್ನು ಪೊಲೀಸರಿಗೆ ಒಪ್ಪಿಸಿರುವ ಆಟೊ ಚಾಲಕ ಜಗದೀಶ್ ಆರ್‌.ಟಿ. ಪ್ರಾಮಾಣಿಕತೆ ಮೆರೆದಿದ್ದಾರೆ.

ಜಗದೀಶ್ ಅವರಪ್ರಾಮಾಣಿಕತೆಯನ್ನು ಮೆಚ್ಚಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಅವರು ಗುರುವಾರ ‘ಪ್ರಶಂಸಾ ಪತ್ರ’ ನೀಡಿ ಸನ್ಮಾನಿಸಿದರು.

ಪರ್ಸ್‌ನಲ್ಲಿ 15 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ ₹ 2, 508 ನಗದು ಇತ್ತು. ಅದನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.