ADVERTISEMENT

ಬಾಬೂ ಜಗಜೀವನ್‌ರಾಂ ಆದರ್ಶ ಪಾಲಿಸಿ

ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 2:58 IST
Last Updated 6 ಏಪ್ರಿಲ್ 2021, 2:58 IST
ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಬಾಬೂ ಜಗಜೀವನರಾಂ ಜಯಂತಿಯನ್ನು ಆಚರಿಸಲಾಯಿತು.
ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಬಾಬೂ ಜಗಜೀವನರಾಂ ಜಯಂತಿಯನ್ನು ಆಚರಿಸಲಾಯಿತು.   

ದಾವಣಗೆರೆ: ಹಸಿರು ಕ್ರಾಂತಿಯ ಹರಿಕಾರರಾದ ಬಾಬೂ ಜಗಜೀವನರಾಂ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ನಡೆಯೋಣ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಇಲ್ಲಿನ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಡಾ. ಬಾಬೂ ಜಗಜೀವನ್ ರಾಂ ಅವರ 114ನೇ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ಸದಸ್ಯ ಕೆ.ಎಸ್.ಬಸವಂತಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ಕೌಸರ್ ರೇಷ್ಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕ ಕೆ.ಎಚ್. ವಿಜಯಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಎಸ್.ಆರ್.ಗಂಗಪ್ಪ, ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಅಮಿತ್ ಬಿದರಿ, ತೋಟಗಾರಿಗೆ ಇಲಾಖೆ ಉಪ ನಿರ್ದೇಶಕ ಲಕ್ಷ್ಮೀಕಾಂತ ಬೋಮ್ಮನ್ನರ್, ಡಿಎಸ್‍ಎಸ್ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ, ಸದಸ್ಯ
ಬಿ. ದುಗ್ಗಪ್ಪ, ಹುಲಿಗೇಶ್, ಸೋಮ್ಲಾಪುರದ ಹನುಮಂತಪ್ಪ ಇದ್ದರು.

ADVERTISEMENT

ಕಾಂಗ್ರೆಸ್‌ನಿಂದ ಆಚರಣೆ

ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಬಾಬೂ ಜಗಜೀವನರಾಂ ಜಯಂತಿ ಆಚರಿಸಲಾಯಿತು.

ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ‘ಜಾತಿವಾದದ ವಿರುದ್ಧ ಹೋರಾಡುವ ಜೊತೆಗೆ, ಜಗಜೀವನ್‍ರಾಂ ಅವರು ರೈಲ್ವೆ ಮತ್ತು ಕೃಷಿ ಎರಡನ್ನೂ ಆಧುನೀಕರಿಸಿದರು, 1971ರಲ್ಲಿ ಬಾಂಗ್ಲಾದೇಶ ಯುದ್ಧದ ಸಮಯದಲ್ಲಿ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದರು’ ಎಂದು ಸ್ಮರಿಸಿದರು.

ಯುವ ಕಾಂಗ್ರೆಸ್ ರಾಷ್ಟ್ರೀಯ ಘಟಕದ ಮೈನುದ್ದೀನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗೀತಾ ಚಂದ್ರಶೇಖರ್, ಜಿಕ್ರಿಯಾ, ಶ್ರೀಕಾಂತ್ ಬಗರೆ, ಹರೀಶ್ ಕೆ.ಎಲ್, ಬಾಷಾ, ಅಲೆಕ್ಸಾಂಡರ್(ಜಾನ್), ಎಚ್.ಇಮ್ತಿಯಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.