ADVERTISEMENT

ಬಿ.ಎನ್.ಗಿರೀಶ್‌ಗೆ ಸರ್ವೋತ್ತಮ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 5:02 IST
Last Updated 24 ಏಪ್ರಿಲ್ 2021, 5:02 IST
ಬಿ.ಎನ್. ಗಿರೀಶ್
ಬಿ.ಎನ್. ಗಿರೀಶ್   

ದಾವಣಗೆರೆ:ಅತ್ಯುನ್ನತ ಸಾಧನೆ ಮಾಡಿದ ಅಧಿಕಾರಿಗಳು ಮತ್ತು ನೌಕರರಿಗೆ ರಾಜ್ಯ ಸರ್ಕಾರ ನೀಡುವ ‘ಸರ್ವೋತ್ತಮ ಸೇವಾ’ ಪ್ರಶಸ್ತಿಗೆ ದಾವಣಗೆರೆ ತಾಲ್ಲೂಕು ತಹಶೀಲ್ದಾರ್ಬಿ.ಎನ್‌. ಗಿರೀಶ್‌ ಅವರು ಆಯ್ಕೆಯಾಗಿದ್ದಾರೆ.

ಬಿ.ಎನ್. ಗಿರೀಶ್ ಅವರು ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಮಾರುವೇಷದಲ್ಲಿ ಅಕ್ರಮ ಕಲ್ಲು ಕ್ವಾರಿಗಳ ಮೇಲೆ ದಾಳಿ ನಡೆಸಿ ಅವುಗಳನ್ನು ಮುಚ್ಚಿಸಿದ್ದರು. ಅಲ್ಲದೇ 6 ತಿಂಗಳಲ್ಲಿ 70 ಸಾವಿರ ಕಡತಗಳನ್ನು ವಿಲೇವಾರಿ ಮಾಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ಶಿವಮೊಗ್ಗ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಮನೆಗಳಿಗೆ ಹಾನಿಯಾದಾಗ ಹೆಚ್ಚಿನ ಪರಿಹಾರ ಕೊಡಿಸಿದ್ದಾರೆ. ಕೋವಿಡ್ ಕರ್ತವ್ಯದಲ್ಲೂ ನಿಷ್ಠೆ ಮೆರೆದಿದ್ದಾರೆ.

ಪ್ರಶಸ್ತಿಯು ತಲಾ ₹25 ಸಾವಿರ ಪ್ರೋತ್ಸಾಹ ಧನ, ಪ್ರಶಸ್ತಿ ಪ್ರಮಾಣ ಪತ್ರವನ್ನು ಒಳಗೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.