ADVERTISEMENT

ಹರಿಹರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ 24ಕ್ಕೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2023, 6:04 IST
Last Updated 22 ಮಾರ್ಚ್ 2023, 6:04 IST
ಡಿ.ಎಂ.ಮಂಜುನಾಥಯ್ಯ
ಡಿ.ಎಂ.ಮಂಜುನಾಥಯ್ಯ   

ಹರಿಹರ: ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಾರ್ಚ್ 24ರಂದು ತಾಲ್ಲೂಕಿನ ಉಕ್ಕಡಗಾತ್ರಿಯಗುರು ಕರಿಬಸವೇಶ್ವರ ಗದ್ದಿಗೆ ಆವರಣದಲ್ಲಿ 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಹರಿಹರ ತಾಲ್ಲೂಕು ಘಟಕ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ ಹೇಳಿದರು.

ಅಂದು ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ ನಡೆಯಲಿದ್ದು, ರಾಷ್ಟ್ರಧ್ವಜವನ್ನು ಉಕ್ಕಡಗಾತ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರಿಬಸಮ್ಮ ಮತ್ತು ಕನ್ನಡ ಧ್ವಜಾರೋಹಣವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ಹಾಗೂ ಪರಿಷತ್ತಿನ ಧ್ವಜಾರೋಹಣವನ್ನು ಹರಿಹರ ತಾಲ್ಲೂಕು ಘಟಕ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ ನೆರವೇರಿಸಲಿದ್ದಾರೆ. ಬೆಳಿಗ್ಗೆ 9ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ತಹಶೀಲ್ದಾರ್ ಪೃಥ್ವಿ ಸಾನಿಕಂ, ಡಿವೈಎಸ್ಪಿ ಪಿ.ಬಿ. ಪ್ರಕಾಶ್, ಗ್ರಾಮಾಂತರ ಸಿಪಿಐ ಗೌಡಪ್ಪಗೌಡ ಭಾಗವಹಿಸುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸ್ವಾತಂತ್ರ‍್ಯ ಯೋಧ ಗೋವಿನಹಾಳ್ ದಿ. ದಡ್ಡಿ ನಿಂಗನಗೌಡರ ವೇದಿಕೆಯಲ್ಲಿ ಬೆಳಿಗ್ಗೆ 10ಕ್ಕೆ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ನಂದಿಗುಡಿ ವೃಷಭಪುರಿ ಸಂಸ್ಥಾನದ ಸಿದ್ದರಾಮೇಶ್ವರ ಶಿವಾಚಾರ್ಯ ಸಾನ್ನಿಧ್ಯ ವಹಿಸುವರು. ಶಾಸಕ ಎಸ್. ರಾಮಪ್ಪ ಅಧ್ಯಕ್ಷತೆ ವಹಿಸುವರು. ಸಾಹಿತಿ ಸತೀಶ್ ಕುಲಕರ್ಣಿ ಉದ್ಘಾಟಿಸುವರು. ಸಂಸದ ಜಿ.ಎಂ. ಸಿದ್ದೇಶ್ವರ ಕರಿಬಸವೇಶ್ವರ ಸ್ವಾಮಿ ಮಹಾದ್ವಾರ ಉದ್ಘಾಟಿಸುವರು, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಚಿತ್ರಕಲಾ ಪ್ರದರ್ಶನ ಉದ್ಘಾಟಿಸುವರು.
ಮಾಜಿ ಶಾಸಕ ಬಿ.ಪಿ.ಹರೀಶ್ ಧ್ವನಿ ಸುರುಳಿ ಬಿಡುಗಡೆ ಮಾಡುವರು ಎಂದು ವಿವರಿಸಿದರು.

ADVERTISEMENT

‘ಹರಿಹರ ತಾಲ್ಲೂಕಿನ ನಾಗರಿಕ ಅವಶ್ಯಕತೆಗಳು ಹಾಗೂ ಪರಿಹಾರಗಳು’ ಗೋಷ್ಠಿಯಲ್ಲಿ ಕಾರ್ಮಿಕ ಮುಖಂಡ ಎಚ್.ಕೆ.ಕೊಟ್ರಪ್ಪ ಉಪನ್ಯಾಸ ನೀಡುವರು. ‘ಹರಿಹರ ತಾಲ್ಲೂಕಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ಅನನ್ಯತೆಗಳು’ ಗೋಷ್ಠಿಯಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ.ಎ.ಬಿ. ರಾಮಚಂದ್ರಪ್ಪ ಉಪನ್ಯಾಸ ನೀಡುವರು. ‘ರೈತರ ಸಮಸ್ಯೆಗಳು ಮತ್ತು ಪರಿಹಾರಗಳು’ ಬಗ್ಗೆ ಪ್ರಗತಿಪರ ರೈತ ಕುಂದೂರು ಮಂಜಪ್ಪ ಉಪನ್ಯಾಸ ನೀಡುವರು ಎಂದರು.

ಮಧ್ಯಾಹ್ನ 3ಕ್ಕೆ ಜೆ. ಕಲೀಂಬಾಷಾ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಸಂಜೆ 4.30ಕ್ಕೆ ಸನ್ಮಾನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ನಿವೃತ್ತ ಪ್ರಾಧ್ಯಾಪಕ ಪ್ರೊ.ಎಚ್.ಎ. ಭಿಕ್ಷಾವರ್ತಿಮಠ ಸಮಾರೋಪ ಭಾಷಣ ಮಾಡುವರು. ಡಿ.ಎಂ. ಮಂಜುನಾಥಯ್ಯ ಅಧ್ಯಕ್ಷತೆ ವಹಿಸುವರು. ಬಿ. ಷಣ್ಮುಖಪ್ಪ ಸಮ್ಮೇಳನಾಧ್ಯಕ್ಷರ ಮಾತು ಆಡುವರು. ಸಂಜೆ 6ಕ್ಕೆ ಬಹಿರಂಗ ಅಧಿವೇಶನ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಹಾಸ್ಯ ಸಂಭ್ರಮ ನಡೆಯಲಿದೆ. ಡಾ.ಎಸ್.ಎಚ್. ಪ್ಯಾಟಿ ಅಧ್ಯಕ್ಷತೆ ವಹಿಸುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಬಿ.ಬಿ. ರೇವಣ ನಾಯ್ಕ್, ಎಂ. ಚಿದಾನಂದ ಕಂಚಿಕೇರಿ, ರೇವಣಸಿದ್ದಪ್ಪ ಅಂಗಡಿ, ಜಿಗಳಿ ಪ್ರಕಾಶ್, ವಿಜಯ ಮಹಾಂತೇಶ್, ದಂಡಿ ತಿಪ್ಪೇಸ್ವಾಮಿ ಮಲೇಬೆನ್ನೂರು, ಎಂ.ಉಮ್ಮಣ್ಣ, ಎ.ಕೆ.ಭೂಮೇಶ್, ಎ.ರಿಯಾಜ್ ಆಹ್ಮದ್, ಈಶಪ್ಪ ಬೂದಿಹಾಳ್, ಚಂದ್ರಶೇಖರ್ ಮಲೆಬೆನ್ನೂರು, ಜಿ.ಎಸ್. ನಾಗರಾಜ್, ಎನ್.ಇ. ಸುರೇಶ್ ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.