ದಾವಣಗೆರೆ: ದಾವಣಗೆರೆಯ ಗ್ರೂಪ್ ಆಫ್ ಐರನ್ ಗೇಮ್ಸ್ ಸಂಸ್ಥೆಯಿಂದ ಏ.10 ಹಾಗೂ 11ರಂದು ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ರಾಜ್ಯಮಟ್ಟದ ‘ಬೆಂಚ್‌ಪ್ರೆಸ್’ ಸ್ಪರ್ಧೆ ಆಯೋಜಿಸಲಾಗಿದೆ ಎಂದುಸಂಸ್ಥೆ ಅಧ್ಯಕ್ಷ ಎಚ್. ದಾದಾಪೀರ್ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎರಡು ದಿನಗಳ ಸ್ಪರ್ಧೆಗಳು ಬಾಲಕರ, ಕಿರಿಯರ, ಹಿರಿಯರ, ಮಹಿಳೆಯರ ವಿಭಾಗದಲ್ಲಿ ನಡೆಯಲಿದೆ. ಎಲ್ಲ ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಸ್ಪರ್ಧೆಯಲ್ಲಿ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳನ್ನು ಜೂನ್‌ನಲ್ಲಿ ಗೋವಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುವುದು’ ಎಂದು ಹೇಳಿದರು.
ಏ.10ರಂದು ಬೆಳಿಗ್ಗೆ 10ಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಿವೈಎಸ್‌ಪಿ ಪಿ.ಬಿ. ಪ್ರಕಾಶ್, ಮೇಯರ್ ಎಸ್.ಟಿ. ವೀರೇಶ್ ಭಾಗವಹಿಸುವರು. ಅಂತರರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಎಂ. ಮಹೇಶ್ವರಯ್ಯ ಅಧ್ಯಕ್ಷತೆ ವಹಿಸುವರು ಎಂದರು.
ಏ.11ರಂದು ಸಂಜೆ 6ಕ್ಕೆ ಸಮಾರೋಪ ನಡೆಯಲಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಡಿವೈಎಸ್‌ಪಿ ನಾಗೇಶ್ ಐತಾಳ್ ಭಾಗವಹಿಸುವರು.ಪವರ್ ಲಿಫ್ಟಿಂಗ್‌ನಲ್ಲಿ ಸಾಧನೆ ಮಾಡಿದ ಅಂತರರಾಷ್ಟ್ರೀಯ ಕ್ರೀಡಾಪಟುಗಳನ್ನು ಸನ್ಮಾನಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆ ಕಾರ್ಯದರ್ಶಿ ರಜ್ವಿಖಾನ್, ಎಂ. ಮಹೇಶ್ವರಯ್ಯ, ಕೆ. ಗಂಗಪ್ಪ, ಷಣ್ಮುಖ ಎಂ.ಎಚ್., ಷರೀಫ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.