
ದಾವಣಗೆರೆ: ಆರ್ಥಿಕ, ಸಾಮಾಜಿಕ ಸಮಾನತೆಯ ಮೂಲಕ ಸಮಾಜದ ಸುಧಾರಣೆ ಸಾಧ್ಯ ಎಂಬುದನ್ನು ಪ್ರತಿಪಾದಿಸಿ, ಆ ತತ್ವಗಳ ಮೂಲಕ ದೇಶದ ಉನ್ನತಿಗೆ ಶ್ರಮಿಸಿದ ಮಹಾನ್ ನಾಯಕ ಡಾ. ಬಾಬೂ ಜಗಜೀವನರಾಂ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಭಿಪ್ರಾಯಪಟ್ಟರು.
ದಾವಣಗೆರೆ ವಿಶ್ವವಿದ್ಯಾನಿಲಯ, ಡಾ.ಬಾಬು ಜಗಜೀವನರಾಂ ಅಧ್ಯಯನ ಕೇಂದ್ರದಿಂದ ಸೋಮ
ವಾರ ಏರ್ಪಡಿಸಿದ್ದ ಬಾಬೂ ಜಗಜೀವನರಾಂ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು
ಮಾತನಾಡಿದರು.
ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಶಿವಾನಂದ ಕೆಳಗಿನಮನಿ, ಕುಲಸಚಿವೆ ಪ್ರೊ.ಗಾಯತ್ರಿ ದೇವರಾಜ ಮಾತನಾಡಿದರು.
ಬಾಬೂ ಜಗಜೀವನರಾಂ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಎಚ್. ವಿಶ್ವನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಿಂಡಿಕೇಟ್ ಸದಸ್ಯ ಇನಾಯತ್ಉಲ್ಲಾ ಟಿ ಮಾತನಾಡಿದರು. ಪರೀಕ್ಷಾಂಗ ಕುಲಸಚಿವೆ ಪ್ರೊ. ಅನಿತಾ ಎಚ್.ಎಸ್, ಹಣಕಾಸು ಅಧಿಕಾರಿ ಪ್ರಿಯಾಂಕ ಡಿ. ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಬಿ.ಎಸ್. ಪ್ರದೀಪ್ ಸ್ವಾಗತಿಸಿದರು. ಪ್ರೊ. ಗೋಪಿನಾಥ ವಂದಿಸಿದರು.
ಡಾ. ಭೀಮಾಶಂಕರ ಜೋಶಿ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.