ADVERTISEMENT

‘ನೇಕಾರರಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ಒತ್ತಾಯ’

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2022, 15:44 IST
Last Updated 21 ಅಕ್ಟೋಬರ್ 2022, 15:44 IST

ಬೆಂಗಳೂರು: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ ಐದು ಕ್ಷೇತ್ರಗಳಲ್ಲಿ ನೇಕಾರರಿಗೆ ಅವಕಾಶ ಕಲ್ಪಿಸಬೇಕು’ ಎಂದು ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಎಸ್. ಸೋಮಶೇಖರ್ ಆಗ್ರಹಿಸಿದರು.

‘ರಾಜ್ಯದಲ್ಲಿ 60 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ನೇಕಾರ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವೇ ಇಲ್ಲದಂತಾಗಿದೆ. ರಾಜ್ಯದ ಎಲ್ಲಾ ಪಕ್ಷಗಳು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಬಿಬಿಎಂಪಿ ಚುನಾವಣೆಯಲ್ಲಿ ಕನಿಷ್ಟ 20 ವಾರ್ಡ್‌ಗಳಲ್ಲಿ ನೇಕಾರರು ಸ್ಪರ್ಧಿಸಲು ಅವಕಾಶ ನೀಡಬೇಕು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ರಾಜ್ಯದಲ್ಲಿ ಹಲವು ಪಂಗಡಗಳಾಗಿ ಗುರುತಿಸಿಕೊಂಡಿರುವ ನೇಕಾರರ ಸಮುದಾಯವನ್ನು ಸಂಘಟಿಸಿ ವಲಯವಾರು ಸಮಾವೇಶಗಳನ್ನು ಹಮ್ಮಿಕೊಂಡು ಸಂಘಟನೆಯನ್ನು ಬಲಪಡಿಸಲಾಗುವುದು. ನವೆಂಬರ್ 6ರಂದು ಮಂಗಳೂರಿನಲ್ಲಿ 13ರಂದು ತುಮಕೂರಿನಲ್ಲಿ ಸಮಾವೇಶಗಳನ್ನು ಆಯೋಜಿಸಲಾಗುವುದು’ ಎಂದು ಮಾಹಿತಿ ನೀಡಿದರು.

ADVERTISEMENT

‘ಸಮುದಾಯದ ಬಹುದಿನಗಳ ಬೇಡಿಕೆಯಾದ ನೇಕಾರ ಮತ್ತು ನೇಕಾರಿಕೆಯ ಅಭಿವೃದ್ಧಿಗೆ ನೇಕಾರರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಬೆಂಗಳೂರಿನಲ್ಲಿ ನೇಕಾರ ಭವನ ನಿರ್ಮಾಣಕ್ಕೆ ನಿವೇಶನವನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಒಕ್ಕೂಟದ ಕಾರ್ಯಧ್ಯಕ್ಷ ರಘು ಎಸ್. ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿ ಕೆ. ಶಿವಪ್ಪ ಶೆಟ್ಟಿ, ಉಪಾಧ್ಯಕ್ಷ ಬಲಭದ್ರ ಜಗದೀಶ್, ಕಂದಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.