ADVERTISEMENT

ಲೋಕಾಯುಕ್ತ ಸಭೆ: 5 ಅರ್ಜಿ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 4:24 IST
Last Updated 21 ಮಾರ್ಚ್ 2023, 4:24 IST
ಹುಬ್ಬಳ್ಳಿಯ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಲೋಕಾಯುಕ್ತರಿಂದ ಸಾರ್ವಜನಿಕ ಕುಂದು ಕೊರತೆಗಳ ಸಭೆಯಲ್ಲಿ ಪೊಲೀಸ್ ಉಪಾಧೀಕ್ಷಕ ಎಚ್.ಕೆ. ಪಠಾಣ್ ಅವರಿಗೆ ಸಾರ್ವಜನಿಕರು ಮನವಿ ಸಲ್ಲಿಸಿದರು
ಹುಬ್ಬಳ್ಳಿಯ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಲೋಕಾಯುಕ್ತರಿಂದ ಸಾರ್ವಜನಿಕ ಕುಂದು ಕೊರತೆಗಳ ಸಭೆಯಲ್ಲಿ ಪೊಲೀಸ್ ಉಪಾಧೀಕ್ಷಕ ಎಚ್.ಕೆ. ಪಠಾಣ್ ಅವರಿಗೆ ಸಾರ್ವಜನಿಕರು ಮನವಿ ಸಲ್ಲಿಸಿದರು   

ಹುಬ್ಬಳ್ಳಿ: ನಗರದ ತಾಲ್ಲೂಕು ಆಡಳಿತ ಸೌಧದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಹಯೋಗದಲ್ಲಿ ಸೋಮವಾರ ಸಾರ್ವಜನಿಕ ಕುಂದು ಕೊರತೆಗಳ ಸಭೆ ನಡೆಯಿತು.

ಪೊಲೀಸ್ ಉಪಾಧೀಕ್ಷಕ ಎಚ್.ಕೆ. ಪಠಾಣ್ ಅವರು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು, ‘ಸಾರ್ವಜನಿಕರಿಂದ 5 ಅರ್ಜಿಗಳು ಬಂದಿದ್ದು, ಅದರಲ್ಲಿ 2 ಅರ್ಜಿಗಳನ್ನು ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಳೇ ಕೋರ್ಟ್ ನ್ಯಾಯಾಲಯದ ಎದುರು ಪಾದಚಾರಿ ಮಾರ್ಗದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿರುವುದು, ನಿಯಮ ಬಾಹಿರವಾಗಿ ವಿಶ್ವೇಶ್ವರ ನಗರದ ಸರ್ಕಾರಿ ಪ್ರೌಢಶಾಲೆಗೆ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗೆ ಅಧ್ಯಕ್ಷರ ನೇಮಕ ಮಾಡಿರುವುದು ಹಾಗೂ ಸಿದ್ಧೇಶ್ವರ ನಗರದ ವಿಜಯನಗರ ತರಬೇತಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರ ನೇಮಕ, ಅಪಘಾತ ವಿಮೆ ಪರಿಹಾರ, ಪೊಲೀಸ್ ಕ್ವಾಟರ್ಸ್‌ನಲ್ಲಿ ಕ್ಷೌರಿಕ ಅಂಗಡಿ ತೆರೆಯುವ ಕುರಿತ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಅರ್ಜಿಗಳನ್ನು ಇತ್ಯರ್ಥಗೊಳಿಸುವಂತೆ ಸೂಚಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್ ಶಿವಾನಂದ ರಾಣೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಅಪರ ತಹಶೀಲ್ದಾರ್ ಶಿವಾನಂದ ಹೆಬ್ಬಳ್ಳಿ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ, ಸಹಕಾರ ಅಭಿವೃದ್ಧಿ ಅಧಿಕಾರಿ ಎ.ಎಂ. ಮುಷಾಫೀರ್, ಸಹಾಯಕ ಕೃಷಿ ನಿರ್ದೇಶಕ ಆರ್.ಎ. ಅಣಗೌಡರ, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಸುರೇಶ ಗುರಣ್ಣವರ ಹಾಗೂ ಇತರ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.