ADVERTISEMENT

ಹಾವೇರಿಯಲ್ಲಿ ಪಾಟೀಲ ಪುಟ್ಟಪ್ಪ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 22:35 IST
Last Updated 16 ಮಾರ್ಚ್ 2020, 22:35 IST
ಪಾಟೀಲ ಪುಟ್ಟಪ್ಪ
ಪಾಟೀಲ ಪುಟ್ಟಪ್ಪ   

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ 10.10ಕ್ಕೆ ನಿಧನರಾದ ಹಿರಿಯ ಪತ್ರಕರ್ತ, ಸಾಹಿತಿಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆ ಮಂಗಳವಾರ ಹಾವೇರಿ ತಾಲ್ಲೂಕು ಹಲಗೇರಿಯಲ್ಲಿ ನಡೆಯಲಿದೆ.

ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸ್ವಗೃಹದಲ್ಲಿಮಂಗಳವಾರ ಬೆಳಿಗ್ಗೆ 9ರಿಂದ 1ರವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು.

ಅಂತ್ಯ ಸಂಸ್ಕಾರವನ್ನು ಹಾವೇರಿ ತಾಲ್ಲೂಕು ಹಲಗೇರಿಯಲ್ಲಿ ನೆರವೇರಿಸಲಾಗುವುದು ಎಂದು ಪಾಟೀಲ ಪುಟ್ಟಪ್ಪ ಅವರ ಪುತ್ರ ಅಶೋಕ್ ಪಾಟೀಲ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.