ADVERTISEMENT

ಜಿಲ್ಲಾ ಪಂಚಾಯ್ತಿ ಕ್ಷೇತ್ರ ಪುನರ್ವಿಂಗಡೆ: ಅರ್ಜಿ ಇತ್ಯರ್ಥಗೊಳಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 20:45 IST
Last Updated 20 ಸೆಪ್ಟೆಂಬರ್ 2021, 20:45 IST
   

ಧಾರವಾಡ: ಜಿಲ್ಲಾ ಪಂಚಾಯ್ತಿ ಮತ್ತು ತಾಲ್ಲೂಕು ಪಂಚಾಯ್ತಿ ಕ್ಷೇತ್ರಗಳ ಪುನರ್ವಿಂಗಡನೆ ಕುರಿತು ಚುನಾವಣಾ ಆಯೋಗಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಗಳನ್ನು ಇಲ್ಲಿನ ಹೈಕೋರ್ಟ್ ಇತ್ಯರ್ಥಗೊಳಿಸಿದೆ.

ಗ್ರಾಮ ಸ್ವರಾಜ್ ಮತ್ತು ಪಂಚಾಯ್ತಿ ಕಾಯ್ದೆಯಡಿ ಚುನಾವಣಾ ಆಯೋಗ ಜಿಲ್ಲಾ ಪಂಚಾಯ್ತಿ ಮತ್ತು ತಾಲ್ಲೂಕು ಪಂಚಾಯ್ತಿ ಕ್ಷೇತ್ರಗಳನ್ನು ಪುನರ್ವಿಂಗಡನೆ ಮಾಡಿ ಅಧಿಸೂಚನೆ ಹೊರಡಿಸಿತ್ತು.

ಈ ಅಧಿಸೂಚನೆಯನ್ನು ಪ್ರಶ್ನಿಸಿ ಬಳ್ಳಾರಿ, ಕೊಪ್ಪಳ, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಹಲವರು ರಿಟ್ ಅರ್ಜಿಗಳನ್ನು ದಾಖಲಿಸಿದ್ದರು.

ADVERTISEMENT

ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣಕುಮಾರ ಅವರಿದ್ದ ನ್ಯಾಯಪೀಠ, ಗ್ರಾಮ ಸ್ವರಾಜ್ ಮತ್ತು ಪಂಚಾಯ್ತಿ ಕಾಯ್ದೆಗೆ ಸರ್ಕಾರ ತಿದ್ದುಪಡಿ ತಂದಿರುವುದರಿಂದ, ಪುನರ್ವಿಂಗಡನೆಗೆ ಸಂಬಂಧಿಸಿದ ಅಧಿಸೂಚನೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯಪಟ್ಟು ಅಧಿಸೂಚನೆಯನ್ನು ಅನೂರ್ಜಿತಗೊಳಿಸಿ, ರಿಟ್ ಅರ್ಜಿಗಳನ್ನು ಇತ್ಯರ್ಥಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.