ADVERTISEMENT

ಚನ್ನರಾಯಪಟ್ಟಣ: ಪ್ರಧಾನಿ ಮೋದಿ ಪೋಟೊ ಹಾಕಿದ ವಿಚಾರಕ್ಕೆ ವಿವಾದ, ಬಿಗಿ ಭದ್ರತೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 11:44 IST
Last Updated 22 ಸೆಪ್ಟೆಂಬರ್ 2021, 11:44 IST
ಚನ್ನರಾಯಪಟ್ಟಣ ತಾಲ್ಲೂಕು ನೊರನಕ್ಕಿ ಗ್ರಾಮಪಂಚಾಯಿತಿ ಕಚೇರಿ ಮುಂದೆ ಪೊಲಿಸ್ ಬಂದೋಬಸ್ತ್ ಮಾಡಲಾಗಿದೆ
ಚನ್ನರಾಯಪಟ್ಟಣ ತಾಲ್ಲೂಕು ನೊರನಕ್ಕಿ ಗ್ರಾಮಪಂಚಾಯಿತಿ ಕಚೇರಿ ಮುಂದೆ ಪೊಲಿಸ್ ಬಂದೋಬಸ್ತ್ ಮಾಡಲಾಗಿದೆ   

ಚನ್ನರಾಯಪಟ್ಟಣ: ದಂಡಿಗನಹಳ್ಳಿ ಹೋಬಳಿ ನೊರನಕ್ಕಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೋಟೊ ಅಳವಡಿಸುವ ವಿಚಾರದಲ್ಲಿ ವಿವಾದ ಉಂಟಾಗಿದ್ದು, ಈ ಬಗ್ಗೆ ದೂರು, ಪ್ರತಿದೂರು ದಾಖಲಾಗಿದ್ದು ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸೆ. 17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ಗ್ರಾಮ ಪಂಚಾಯಿತಿ ಕಚೇರಿಗೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಹಲವರು ಏಕಾಏಕಿ ಕಚೇರಿ ಪ್ರವೇಶಿಸಿ ಪ್ರಧಾನಿಯ ಫೋಟೊ ಅಳವಡಿಸಿದ್ದಾರೆ. ಈ ಸಂದರ್ಭದಲ್ಲಿ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು 20 ಜನರ ವಿರುದ್ಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೆ. 18ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪ್ರಧಾನಿಯ ಫೋಟೊ ಅಳವಡಿಸಿದ ನಂತರ ಅಭಿವೃದ್ಧಿ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಕೆಲ ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿ 16 ಜನರ ವಿರುದ್ಧ ಗ್ರಾಮ ಪಂಚಾಯಿತಿ ಸದಸ್ಯೆ ಚಂದ್ರಕಲಾ ಸೆ. 19ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ಗ್ರಾಮ ಪಂಚಾಯಿತಿ ಕಚೇರಿ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಈ ಘಟನೆಯಿಂದಾಗಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಗ್ರಾಮ ಪಂಚಾಯಿತಿ ವ್ಯಾಪ್ತಿ ಶಾಸಕ ಎಚ್.ಡಿ. ರೇವಣ್ಣ ಪ್ರತಿನಿಧಿಸುವ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಕ್ಕೆ ಬರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.