ADVERTISEMENT

ಪೂರ್ಣಪ್ರಮಾಣದ ಶಾಲೆ ಆರಂಭ; ಅಧಿವೇಶನದ ಬಳಿಕ ನಿರ್ಧಾರ: ನಾಗೇಶ್

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 21:01 IST
Last Updated 19 ಸೆಪ್ಟೆಂಬರ್ 2021, 21:01 IST

ರಾಣೆಬೆನ್ನೂರು (ಹಾವೇರಿ ಜಿಲ್ಲೆ): ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್‌ ತಾಂತ್ರಿಕ ತಜ್ಞರ ಜತೆ ಸಭೆ ನಡೆಸಿ 1 ರಿಂದ 5ನೇ ತರಗತಿ ಶಾಲೆ ಪೂರ್ಣ ಪ್ರಮಾಣದಲ್ಲಿ ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಭಾನುವಾರ ತಾಲ್ಲೂಕಿನ ಸುಕ್ಷೇತ್ರ ದೇವರಗುಡ್ಡ ಮಾಲತೇಶ ದೇವರ ದರ್ಶನದ ಬಳಿಕ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳ ಕಿಟ್‌ ವಿತರಿಸಿ ಅವರು ಮಾತನಾಡಿದರು.

‘ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರು ಎಲ್ಲ ತಯಾರಿ ಮಾಡಿಕೊಂಡಿದ್ದೇನೆ. ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಉತ್ಸುಕರಾಗಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.