ADVERTISEMENT

ಕಲಬುರ್ಗಿ: ಮುಖ್ಯ ರಸ್ತೆಯಲ್ಲಿ ಯುವಕನ ಹತ್ಯೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 6:47 IST
Last Updated 17 ಜೂನ್ 2021, 6:47 IST
   

ಕಲಬುರ್ಗಿ: ನಗರದ ಹಿಂದಿ ಪ್ರಚಾರ ಸಭಾ ಮುಂಭಾಗದ ಮುಖ್ಯ ರಸ್ತೆಯಲ್ಲಿ ಬುಧವಾರ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ.

ರವಿಕುಮಾರ ಗೋಟೂರ್ ಅಲಿಯಾಸ್ ರವಿ ಪೂಜಾರಿ (30) ಕೊಲೆಯಾದವರು.

ರವಿಕುಮಾರನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಇರಿದಿದ್ದಾರೆ. ಕೊಲೆಗೆ ಬಳಸಿದ ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಎಸೆದು ಪರಾರಿಯಾಗಿದ್ದಾರೆ.

ADVERTISEMENT

ರವಿಕುಮಾರ 2019ರಲ್ಲಿ ಯುವತಿಯೊಬ್ಬರ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಫೆಬ್ರುವರಿಯಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದ. ಆತನ ಚಲನವಲನಗಳನ್ನು ಗಮನಿಸಿದ ದುಷ್ಕರ್ಮಿಗಳ ತಂಡ ಬುಧವಾರ ರಾತ್ರಿ 2ಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.