ADVERTISEMENT

ಯೋಧನ ಮೇಲೆ ಹಲ್ಲೆ ಪ್ರಕರಣ: ಮಡಿಕೇರಿಯಲ್ಲಿ ಮಾಜಿ ಸೈನಿಕರ ಬೃಹತ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2021, 7:04 IST
Last Updated 30 ಜುಲೈ 2021, 7:04 IST
   

ಮಡಿಕೇರಿ: ಯೋಧ ಅಶೋಕ್ ಕುಮಾರ್ ಹಾಗೂ ಅವರ ಕುಟುಂಬದ ಮೇಲೆ ಹಲ್ಲೆ ಖಂಡಿಸಿ, ನಗರದಲ್ಲಿ ಶುಕ್ರವಾರ ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಗೆ ಎಬಿವಿಪಿ ಹಾಗೂ ಹಿಂದೂ ಜಾಗರಣಾ ವೇದಿಕೆಯು ಬೆಂಬಲ ಸೂಚಿಸಿದೆ. ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ.

ಜುಲೈ 26ರಂದು ಕುಶಾಲನಗರದಿಂದ ಮಡಿಕೇರಿಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಯೋಧನ ಕಾರಿಗೆ, ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿಯಾಗಿತ್ತು. ಆಗ ಪರಸ್ಪರ ವಾಗ್ವಾದವಾಗಿ ಗಲಾಟೆ ನಡೆದಿತ್ತು. ಆಗ, ಸೈನಿಕ ಕುಟುಂಬದ ಮೇಲೆ ಗುಂಪೊಂದುಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪವಿದೆ. ಐವರು ಆರೋಪಗಳನ್ನು ಬಂಧಿಸಲಾಗಿತ್ತು. ಮೂವರು ಜಾಮೀನನ ಮೇಲೆ ಬಿಡುಗಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT