ADVERTISEMENT

ಜಿಲ್ಲೆಯಲ್ಲಿ ರಕ್ತದ ಕೊರತೆ ತೀವ್ರ

ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರದಲ್ಲಿ ಡಾ. ಕರುಂಬಯ್ಯ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2023, 16:26 IST
Last Updated 8 ಮಾರ್ಚ್ 2023, 16:26 IST
ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ. ಕರುಂಬಯ್ಯ ಉದ್ಘಾಟಿಸಿದರು. ಶಸ್ತ್ರಚಿಕಿತ್ಸಕರಾದ ಸತೀಶ್, ತಥಾಸ್ತು ಸಾತ್ವಿಕ ಸಂಸ್ಥೆಯ ಅಧ್ಯಕ್ಷ ಉದಯ ಮಾಳವ, ಶಿವಕುಮಾರ್, ಗಿರೀಶ್ ಇದ್ದರು
ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ. ಕರುಂಬಯ್ಯ ಉದ್ಘಾಟಿಸಿದರು. ಶಸ್ತ್ರಚಿಕಿತ್ಸಕರಾದ ಸತೀಶ್, ತಥಾಸ್ತು ಸಾತ್ವಿಕ ಸಂಸ್ಥೆಯ ಅಧ್ಯಕ್ಷ ಉದಯ ಮಾಳವ, ಶಿವಕುಮಾರ್, ಗಿರೀಶ್ ಇದ್ದರು   

ಸೋಮವಾರಪೇಟೆ: ‘ಜಿಲ್ಲೆಯಲ್ಲಿ ಈ ಹಿಂದೆ ಸಾಕಷ್ಟು ರಕ್ತದ ಸಂಗ್ರಹವಿತ್ತು. ಆದರೆ, ಇತ್ತಿಚಿನ ದಿನಗಳಲ್ಲಿ ರಕ್ತದ ಕೊರತೆ ತೀವ್ರವಾಗಿ ಕಾಡುತ್ತಿದೆ’ ಎಂದು ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ. ಕರುಂಬಯ್ಯ ಹೇಳಿದರು.

ಅಬಕಾರಿ ಇಲಾಖೆ, ಮಡಿಕೇರಿಯ ರಕ್ತನಿಧಿ ಕೇಂದ್ರ ಹಾಗೂ ತಥಾಸ್ತು ಸಾತ್ವಿಕ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಬುಧ
ವಾರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಸಾಕಷ್ಟು ಸಂಘ ಸಂಸ್ಥೆಗಳಿದ್ದು, ತಮ್ಮ ಇತರೆ ಕಾರ್ಯಕ್ರಮಗಳ ನಡುವೆ ರಕ್ತದಾನ ಕಾರ್ಯಕ್ರಮವನ್ನು ಮಾಡಿದರೆ, ರಕ್ತದ ಸಂಗ್ರಹ ಹೆಚ್ಚಾಗುತ್ತದೆ. ಆರೋಗ್ಯವಂತ ದಾನಿಗಳು ರಕ್ತ ದಾನ ಮಾಡಲು ಮುಂದಾಗಬೇಕು’ ಎಂದರು.

ADVERTISEMENT

‘ಜಿಲ್ಲೆಯಲ್ಲಿ 4 ರಕ್ತ ಸಂಗ್ರಹ ಕೇಂದ್ರಗ
ಳಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ರಕ್ತ ಸಂಗ್ರಹವಾಗುತ್ತಿಲ್ಲ. ಪ್ರಸ್ತುತ ಜಿಲ್ಲೆಯಲ್ಲಿ ಪ್ರತಿ ತಿಂಗಳಿಗೆ 500 ಯೂನಿಟ್ ರಕ್ತದ ಅವಶ್ಯಕತೆ ಇದೆ. ಜಿಲ್ಲೆಯ ಸೇವಾ ಸಂಸ್ಥೆಗಳು, ಸಂಘ ಸಂಸ್ಥೆ
ಗಳು ರಕ್ತದಾನದಂತಹ ಮಹತ್ಕಾರ್ಯ ಕೈಗೊಂಡಲ್ಲಿ ಮಾತ್ರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ರಕ್ತದ ಕೊರತೆಯನ್ನು ನೀಗಬಹುದು’ ಎಂದರು.

ಅಬಕಾರಿ ಇಲಾಖೆಯ ನಿರೀಕ್ಷಕ ಲೋಕೇಶ್ ಸುವರ್ಣ ಮಾತನಾಡಿದರು. ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಸತೀಶ್, ತಥಾಸ್ತು ಸಾತ್ವಿಕ ಸಂಸ್ಥೆಯ ಅಧ್ಯಕ್ಷ ಉದಯ ಮಾಳವ, ಶಿವಕುಮಾರ್, ಗಿರೀಶ್, ಮಡಿಕೇರಿ ರಕ್ತ ನಿಧಿ ಕೇಂದ್ರದ ವೈದ್ಯ ಸಂಧ್ಯಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.