ADVERTISEMENT

ದಂಡಿನ ಮಾರಿಯಮ್ಮ ದೇಗುಲ; ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ

ಎರಡು ದಿನಗಳ ನಡೆದ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2023, 14:34 IST
Last Updated 17 ಮಾರ್ಚ್ 2023, 14:34 IST
ಮಡಿಕೇರಿಯ ದಂಡಿನ ಮಾರಿಯಮ್ಮ ದೇವಿಯ ವಿಗ್ರಹಕ್ಕೆ ಅರ್ಚಕರು ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು
ಮಡಿಕೇರಿಯ ದಂಡಿನ ಮಾರಿಯಮ್ಮ ದೇವಿಯ ವಿಗ್ರಹಕ್ಕೆ ಅರ್ಚಕರು ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು   

ಮಡಿಕೇರಿ: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಶುಕ್ರವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.

ವಾರ್ಷಿಕೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಿದವು.

ಗುರುವಾರ ಸಂಜೆ ಪ್ರಸಾದ ಸಿದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಲಿ (ದಿಕ್ಷಾಲಕ ಬಲಿ), ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು.

ADVERTISEMENT

ಶುಕ್ರವಾರ ಮುಂಜಾನೆಯಿಂದಲೇ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ, ದೇವಿಗೆ ಅಲಂಕಾರ ಪೂಜೆ ಜರುಗಿದವು. ಮಧ್ಯಾಹ್ನ ಮಹಾ ಪೂಜೆ ನಂತರ ಸೇರಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ನಗರದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.