ADVERTISEMENT

ಗುಂಡು ಹಾರಿಸಿ ಮಾವನನ್ನು ಹತ್ಯೆ ಮಾಡಿದ ಸೊಸೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2023, 4:27 IST
Last Updated 13 ಮಾರ್ಚ್ 2023, 4:27 IST
   

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಕಿಕ್ಕರಹಳ್ಳಿ ಗ್ರಾಮದ ಮಂದಣ್ಣ (75) ಅವರು ಗುಂಡೇಟಿನಿಂದ ಮೃತಪಟ್ಟಿದ್ದಾರೆ.

ಇವರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಆರೋಪದ ಮೇರೆಗೆ ಅವರ ಸೊಸೆ ನೀಲಮ್ಮ (24) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲಿ ಇಬ್ಬರೇ ಇದ್ದ ವೇಳೆ ನೀಲಮ್ಮ ತಮ್ಮ ಮಾವ ಮಂದಣ್ಣ ಅವರ ಮೇಲೆ ಗುಂಡು ಹಾರಿಸಿದ್ದಾರೆ.

ADVERTISEMENT

ಗುಂಡೇಟಿನಿಂದ ಮಂದಣ್ಣ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕೊಲೆಗೆ ಕೌಟುಂಬಿಕ ಕಲಹ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.