ADVERTISEMENT

ಕೆರೆ ಒತ್ತುವರಿ: ಸರ್ವೆ ವರದಿ ಸಲ್ಲಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 5:28 IST
Last Updated 13 ಜುಲೈ 2021, 5:28 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕೊಡಗು ಜಿಲ್ಲೆ ಕುಶಾಲನಗರದ ಕೆರೆ(ತಾವರೆಕೆರೆ) ಪ್ರದೇಶದ ಬಗ್ಗೆ ನಡೆಸಿರುವ ಸರ್ವೆಗೆ ಸಂಬಂಧಿಸಿದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೆರೆ ಒತ್ತುವರಿ ಸಂಬಂಧ ವಕೀಲ ಎನ್‌.ಪಿ. ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

ದಾಖಲೆಗಳ ಪ್ರಕಾರ ಕೆರೆಯ ಜಾಗ 19 ಎಕರೆ ಇದೆ. ಸುತ್ತಮುತ್ತಲಿನ ಪ್ರಭಾವಿಗಳು ಕೆರೆ ಪ್ರದೇಶ ಒತ್ತುವರಿ ಮಾಡಿ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ದೂರಿದರು.

ADVERTISEMENT

ಸರ್ವೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ ಪೀಠ, ವರದಿ ಲಭ್ಯವಾದ ಬಳಿಕ ಒತ್ತುವರಿ ತೆರವಿಗೆ ಆದೇಶ ಮಾಡಲಾಗುವುದು ಎಂದು ತಿಳಿಸಿತು. ವಿಚಾರಣೆಯನ್ನು ಜು.20ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.