ADVERTISEMENT

‌ಕೊಡಗು: ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 12:44 IST
Last Updated 14 ಮಾರ್ಚ್ 2023, 12:44 IST
   

ಸುಂಟಿಕೊಪ್ಪ (ಕೊಡಗು ಜಿಲ್ಲೆ): ಕೊಡಗು ಜಿಲ್ಲೆಯ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ.

ಇಲ್ಲಿನ ಪನ್ಯ ಮತ್ತು ಗುಂಡುಗುಟ್ಟಿ ಭಾಗದಲ್ಲಿ ಸುಮಾರು 30 ನಿಮಿಷಗಳ ಕಾಲ ಆಲಿಕಲ್ಲು ಮಳೆಯಾಗಿದೆ. ಇಲ್ಲಿನ ಕೆಲವು ಭಾಗಗಳಲ್ಲಿ ಆಲಿಕಲ್ಲು ರಾಶಿರಾಶಿಯಾಗಿ ಬಿದ್ದಿದ್ದು, ನೆಲವು ಹಾಲಿನಂತೆ ಗೋಚರಿಸಿತು.

ಮಳೆಯೊಂದಿಗೆ ಜೋರಾಗಿ ಗಾಳಿಯೂ ಬೀಸಿದ್ದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಗುಡುಗು, ಸಿಡಿಲಿನಿಂದ ಕೂಡಿದ ವರ್ಷಧಾರೆ ಬಿಸಿಲಿನ ಬೇಗೆಯನ್ನು ತಣಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.