ADVERTISEMENT

ಮಡಿಕೇರಿ: ಗ್ರಾಮ ಪಂಚಾಯಿತಿ ಸದಸ್ಯೆ ಸೇರಿ ಇಬ್ಬರ ಸಾವು- ಆತ್ಮಹತ್ಯೆ ಶಂಕೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 10:34 IST
Last Updated 16 ಸೆಪ್ಟೆಂಬರ್ 2021, 10:34 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮಡಿಕೇರಿ: ತಾಲ್ಲೂಕಿನ ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ಕಮಲಾ (35) ಹಾಗೂ ಅವರ ಸಂಬಂಧಿ ಮುತ್ತು (50) ಅವರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಮಧ್ಯಾಹ್ನ ಪತ್ತೆಯಾಗಿವೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ದಬ್ಬಡ್ಕದ ಬಳಿ ಒಂದೇ ಮರದಲ್ಲಿ ಇಬ್ಬರ ಮೃತದೇಹಗಳು ಕಂಡುಬಂದಿವೆ. ಬುಧವಾರ ಸಂಜೆ ಇಬ್ಬರು ನಾಪತ್ತೆಯಾಗಿರುವ ಶಂಕೆಯ ಮೇರೆಗೆ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಹುಡುಕಾಟ ನಡೆಸಿದ್ದರು. ದಬ್ಬಡ್ಕ ನದಿ ತೀರದಲ್ಲೂ ಶೋಧ ಕಾರ್ಯ ನಡೆಸಲಾಗಿತ್ತು. ಘಟನೆಗೆ ಕಾರಣ ತಿಳಿದುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT