ADVERTISEMENT

ಕಸ ಸಂಗ್ರಹಣೆಗೆ ಬಕೆಟ್‌ ವಿತರಣೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2021, 4:54 IST
Last Updated 30 ಜೂನ್ 2021, 4:54 IST
ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮ ಪಂಚಾಯಿತಿ ವತಿಯಿಂದ ಕಸ ಸಂಗ್ರಹಿಸಲು ಜನರಿಗೆ ಬಕೆಟ್‌ಗಳನ್ನು ವಿತರಿಸಲಾಯಿತು. ಶಾಸಕ ಅಪ್ಪಚ್ಚು ರಂಜನ್ ಇದ್ದಾರೆ
ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮ ಪಂಚಾಯಿತಿ ವತಿಯಿಂದ ಕಸ ಸಂಗ್ರಹಿಸಲು ಜನರಿಗೆ ಬಕೆಟ್‌ಗಳನ್ನು ವಿತರಿಸಲಾಯಿತು. ಶಾಸಕ ಅಪ್ಪಚ್ಚು ರಂಜನ್ ಇದ್ದಾರೆ   

ಸೋಮವಾರಪೇಟೆ: ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿ ವತಿಯಿಂದ 14ನೇ ಹಣಕಾಸು ಯೋಜನೆಯಡಿ ಪಂಚಾಯಿತಿ ವ್ಯಾಪ್ತಿಯ 1,600 ಕುಟುಂಬಗಳಿಗೆ ಒಣ ಮತ್ತು ಹಸಿ ಕಸ ವಿಂಗಡಿಸಿ ಸಂಗ್ರಹಿಸಲು ಬಕೆಟ್‌ಗಳನ್ನು ನೀಡಲಾಯಿತು.

ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕ ಅಪ್ಪಚ್ಚು ರಂಜನ್ ಬಕೆಟ್‌ಗಳನ್ನು ವಿತರಿಸಿದರು.

ನಂತರ ಮಾತನಾಡಿದ ಶಾಸಕರು, ‘ಮನೆಯ ಸುತ್ತಮುತ್ತಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ರತಿಯೊಬ್ಬರೂ ಒಣ ಹಾಗೂ ಹಸಿ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ, ಬೆಳಗ್ಗಿನ ಸಮಯದಲ್ಲಿ ಕಸ ವಿಲೇವಾರಿ ಆಟೊಗೆ ನೀಡಬೇಕು’ ಎಂದು ಹೇಳಿದರು.

ADVERTISEMENT

ಪಂಚಾಯಿತಿ ಅಧ್ಯಕ್ಷ ಎನ್.ಟಿ. ಪರಮೇಶ್ ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯಲ್ಲಿ 278 ಮಂದಿ ಕೊರೊನಾ ಸೋಂಕಿಗೆ ಒಳಗಾಗಿ, 7 ಮಂದಿ ಮೃತಪಟ್ಟಿದ್ದಾರೆ. ಈಗ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಈ ವ್ಯಾಪ್ತಿಯ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಮತ್ತು ಸ್ವಯಂ ಸೇವಕರ ಸಹಕಾರದಿಂದಾಗಿ ಸಾಧ್ಯವಾಗಿದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಶಾಸಕರು ಆಹಾರ
ಸಾಮಗ್ರಿ ಕಿಟ್ ವಿತರಿಸಿ, ಕೊರೊನಾ ಸೇನಾನಿಗಳ ಸೇವೆಯನ್ನು
ಶ್ಲಾಘೀಸಿದರು.

ಪಂಚಾಯಿತಿ ಸದಸ್ಯ ನತೀಶ್ ಮಂದಣ್ಣ ಕೊರೊನಾ ಸೇನಾನಿಗಳಿಗೆ ಪ್ರೋತ್ಸಾಹ ಧನ ನೀಡಿದರು.

ಕಾರ್ಯಕ್ರಮದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಜಯಲಕ್ಷ್ಮೀ ಸುಬ್ರಮಣಿ, ಮಂಡಲ ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ಪ್ರಮುಖರಾದ ಲೋಕೇಶ್ವರಿ ಗೋಪಾಲ್, ತಂಗಮ್ಮ, ಎಂ.ಬಿ. ಅಭಿಮನ್ಯುಕುಮಾರ್
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.