ADVERTISEMENT

ಕೊಡಗಿನಲ್ಲಿ ‌ಮುಂಗಾರು ಮಳೆ ಆರ್ಭಟ: ಜನಜೀವನ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 8:56 IST
Last Updated 17 ಜೂನ್ 2021, 8:56 IST
ರಸ್ತೆಯಲ್ಲಿ ಬೃಹತ್‌ ಮರ ಬಿದ್ದಿರುವ ದೃಶ್ಯ
ರಸ್ತೆಯಲ್ಲಿ ಬೃಹತ್‌ ಮರ ಬಿದ್ದಿರುವ ದೃಶ್ಯ    

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು‌ ಮಳೆ ಆರ್ಭಟಿಸುತ್ತಿದೆ. ಗಾಳಿ ಹಾಗೂ ಜೋರು ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಏರಿಕೆಯಾಗಿದೆ. ಕಾವೇರಿ ನದಿ ಮೈದುಂಬಿಕೊಂಡು ಹರಿಯುತ್ತಿದೆ. ಹಾರಂಗಿ ಜಲಾಶಯದ ಒಳಹರಿವು 1,411 ಕ್ಯುಸೆಕ್‌ಗೆ ಏರಿಕೆಯಾಗಿದೆ.

ಗಾಳಿಯಿಂದ ರಾಷ್ಟ್ರೀಯ ಹಾಗೂ, ರಾಜ್ಯ ಹೆದ್ದಾರಿಯ ಅಲ್ಲಲ್ಲಿ ಮರಗಳು ಉರುಳಿದ್ದು ತೆರವು ಕಾರ್ಯ ನಡೆಯುತ್ತಿದೆ. ನಾಪೋಕ್ಲು ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ಹಲವು ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.

ADVERTISEMENT
ಮಳೆಯಿಂದಾಗಿ ಮರಗಳು ಧರೆಗುರುಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.