ADVERTISEMENT

ಮಡಿಕೇರಿ: ಜನರಲ್ ತಿಮ್ಮಯ್ಯ ಮೊಮ್ಮಗಳ ಮೊದಲ ಭೇಟಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2023, 6:11 IST
Last Updated 10 ಮಾರ್ಚ್ 2023, 6:11 IST
ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ತಿಮ್ಮಯ್ಯ ಅವರ ಮೊಮ್ಮಗಳು ಅಮೃತಾ ಸಂತೋಷ್ ಅವರು ಗುರುವಾರ ಭೇಟಿ ನೀಡಿ ಸ್ಮಾರಕ ಭವನ ವೀಕ್ಷಿಸಿದರು.
ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ತಿಮ್ಮಯ್ಯ ಅವರ ಮೊಮ್ಮಗಳು ಅಮೃತಾ ಸಂತೋಷ್ ಅವರು ಗುರುವಾರ ಭೇಟಿ ನೀಡಿ ಸ್ಮಾರಕ ಭವನ ವೀಕ್ಷಿಸಿದರು.   

ಮಡಿಕೇರಿ: ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ತಿಮ್ಮಯ್ಯ ಅವರ ಮೊಮ್ಮಗಳು ಅಮೃತಾ ಸಂತೋಷ್ ಅವರು ಗುರುವಾರ ಭೇಟಿ ನೀಡಿ ಸ್ಮಾರಕ ಭವನ ವೀಕ್ಷಿಸಿದರು.

ಇದೇ ಮೊದಲ ಬಾರಿಗೆ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿದ ಅಮೃತಾ ತನ್ನ ಅಜ್ಜ ತಿಮ್ಮಯ್ಯ ಅವರ ಸ್ಮರಣಾರ್ಥ ಸರ್ಕಾರ ರೂಪಿಸಿದ ಸಂಗ್ರಹಾಲಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮ್ಯೂಸಿಯಂ ವ್ಯವಸ್ಥಾಪಕ ಗೌಡಂಡ ಸುಬೇದಾರ್ ಮೇಜರ್ ತಿಮ್ಮಯ್ಯ ಇಲ್ಲಿನ ಸಂಗ್ರಹದ ಬಗ್ಗೆ ಮಾಹಿತಿ ನೀಡಿದರು. ಅಮೃತಾ ಅವರು ಜನರಲ್ ತಿಮ್ಮಯ್ಯ ಪುತ್ರಿ ಮಿರೆಲ್ - ಮೇಜರ್ ಜನರಲ್ ಕೊಂಗೇಟಿರ ಚಂಗಪ್ಪ ಅವರ ಪುತ್ರಿಯಾಗಿದ್ದು, ಉತ್ತರಾಂಚಲ್‍ನ ಅಲ್ಮೋರಾ ಎಂಬಲ್ಲಿ ನೆಲೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.