ADVERTISEMENT

ಜಿಲ್ಲಾ ನ್ಯಾಯಾಲಯದಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2023, 6:07 IST
Last Updated 10 ಮಾರ್ಚ್ 2023, 6:07 IST
ವಿದ್ಯುನ್ಮಾನ ಮತಯಂತ್ರ (ಇವಿಎಂ) ಹಾಗೂ ವಿವಿಪ್ಯಾಟ್ (ಮತದಾನ ಖಾತರಿ ಯಂತ್ರ)ದ ಪ್ರಾತ್ಯಕ್ಷಿಕೆಯು ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ನಡೆಯಿತು. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಎಂ.ಭೃಂಗೇಶ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇದ್ದಾರೆ
ವಿದ್ಯುನ್ಮಾನ ಮತಯಂತ್ರ (ಇವಿಎಂ) ಹಾಗೂ ವಿವಿಪ್ಯಾಟ್ (ಮತದಾನ ಖಾತರಿ ಯಂತ್ರ)ದ ಪ್ರಾತ್ಯಕ್ಷಿಕೆಯು ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ನಡೆಯಿತು. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಎಂ.ಭೃಂಗೇಶ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇದ್ದಾರೆ   

ಮಡಿಕೇರಿ: ವಿದ್ಯುನ್ಮಾನ ಮತಯಂತ್ರ (ಇವಿಎಂ) ಹಾಗೂ ವಿವಿಪ್ಯಾಟ್ (ಮತದಾನ ಖಾತರಿ ಯಂತ್ರ)ದ ಪ್ರಾತ್ಯಕ್ಷಿಕೆಯು ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಎಂ.ಭೃಂಗೇಶ್ ಅವರ ಸಮ್ಮುಖದಲ್ಲಿ ಗುರುವಾರ ನಡೆಯಿತು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಜಿಲ್ಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ 542 ಮತಗಟ್ಟೆ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಈ ಕುರಿತ ಸಂಚಾರಿ ವಾಹನವು ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಎಲ್ಲಾ 542 ಮತಗಟ್ಟೆಗಳ ವ್ಯಾಪ್ತಿಯಲ್ಲಿಯೂ ಮತದಾರರಲ್ಲಿ ಅರಿವು ಮೂಡಿಸಲಿದೆ. ಈ ಕಾರ್ಯ ಚುನಾವಣೆ ಘೋಷಣೆಯಾಗುವವರೆಗೆ ಇರಲಿದೆ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ನ್ಯಾಯಾಂಗ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಕೆ.ಕೆಂಪರಾಜು, ತಹಶೀಲ್ದಾರ್ ಕಿರಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.