ADVERTISEMENT

‘ಸಮಾನತೆಗಾಗಿ ಪುರುಷ ದ್ವೇಷ ಒಳ್ಳೆಯದಲ್ಲ’

ಕುಶಾಲನಗರ: ಪ್ರೆಸ್‌ಕ್ಲಬ್‌ನಿಂದ ವಿಶ್ವ ಮಹಿಳಾ ದಿನಾಚರಣೆ; ಸಾಧಕರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2023, 16:22 IST
Last Updated 8 ಮಾರ್ಚ್ 2023, 16:22 IST
ಕುಶಾಲನಗರದಲ್ಲಿ ಬುಧವಾರ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ‌ ಮಹೋತ್ಸವ ಅಂಗವಾಗಿ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು
ಕುಶಾಲನಗರದಲ್ಲಿ ಬುಧವಾರ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ‌ ಮಹೋತ್ಸವ ಅಂಗವಾಗಿ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು   

ಕುಶಾಲನಗರ: ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ‌ ಮಹೋತ್ಸವ ಅಂಗವಾಗಿ ಸಾಂಸ್ಕೃತಿಕ ಸಮಿತಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕುಶಾಲನಗರ ತಾಲ್ಲೂಕು‌ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಇಲ್ಲಿನ ಎಪಿಸಿಎಂಸಿ ಸಭಾಂಗಣದಲ್ಲಿ ಬುಧವಾರ ವಿಶ್ವ ಮಹಿಳಾ ದಿನಾಚರಣೆ ನಡೆಯಿತು.

ಬೆಳ್ಳಿ‌ ಮಹೋತ್ಸವ ಆಚರಣಾ ಸಮಿತಿ‌ ಮಹಾ ಪೋಷಕ ಜಿ.ರಾಜೇಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿ, ‘ಇಂದಿನ ಆಧುನಿಕ‌ ಕಾಲಘಟ್ಟದಲ್ಲಿ‌ ಮಹಿಳೆ ಸಶಕ್ತಳಾಗಿದ್ದಾಳೆ. ದೇಶದಲ್ಲಿ ಎಲ್ಲಾ ಕ್ಷೇತ್ರದಲ್ಲಿ‌ ಮಹಿಳೆಯರಿಗೆ ಪ್ರಾಧಾನ್ಯತೆ ದೊರೆಯುತ್ತಿದೆ‌’ ಎಂದರು.

ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ‘ಮಹಿಳಾ ದಿನಾಚ
ರಣೆ ಪುರುಷ ದ್ವೇಶಿ‌ ಕಾರ್ಯಕ್ರಮವಾಗ
ಬಾರದು. ಮಕ್ಕಳನ್ನು ಸುಸಂಸ್ಕೃತರಾ
ಗಿಸುವ ನಿಟ್ಟಿನಲ್ಲಿ‌ ಪೋಷಕರು ಮುಖ್ಯ ಪಾತ್ರ ವಹಿಸಬೇಕು’ ಎಂದರು.

ADVERTISEMENT

ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ ಅಧ್ಯಕ್ಷತೆ ವಹಿಸಿ‌ ಮಾತನಾಡಿ, ಬೆಳ್ಳಿ ಹಬ್ಬ ಆಚರಣೆ ಸಂಬಂಧ ಕೈಗೊಂಡಿರುವ ವಿವಿಧ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ, ದಿನದ ಶುಭಾಶಯ ಕೋರಿದರು.

ಸೋಮವಾರಪೇಟೆ ಅಬಕಾರಿ‌ ಡಿವೈಎಸ್ಪಿ ಚೈತ್ರಾ, ಜಿಪಂ ಮಾಜಿ ಸದಸ್ಯೆ ಕೆ.ಪಿ.ಚಂದ್ರಕಲಾ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ಮಾತನಾಡಿದರು. ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರು ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿವಿಧ ಕ್ಷೇತ್ರಗಳ ಸಾಧಕ ಮಹಿಳೆಯರನ್ನು‌ ಸನ್ಮಾನಿಸಿ ಗೌರವಿಸಲಾಯಿತು. ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ, ಕಾರ್ಯಕ್ರಮ ಸಂಚಾಲಕಿ ವನಿತಾ ಚಂದ್ರಮೋಹನ್ ಸೇರಿದಂತೆ ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.