ADVERTISEMENT

ಅಡುಗೆ ಮಾಡುವಾಗ ಬೆಂಕಿ ತಗುಲಿ ನಿವೃತ್ತ ಶಿಕ್ಷಕಿ ಸಾವು

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 3:39 IST
Last Updated 22 ಸೆಪ್ಟೆಂಬರ್ 2021, 3:39 IST
ಪ್ರೇಮಾ ಪದಕಿ
ಪ್ರೇಮಾ ಪದಕಿ   

ಕನಕಗಿರಿ: ಅಡುಗೆ ಮಾಡುವ ಸಮಯದಲ್ಲಿ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಗುಲಿದ ಪರಿಣಾಮಇಲ್ಲಿನ 5ನೇ ವಾರ್ಡ್ ನಿವಾಸಿ, ನಿವೃತ್ತ ಶಿಕ್ಷಕಿ ಪ್ರೇಮಾ ಪದಕಿ (67) ಮಂಗಳವಾರಮೃತಪಟ್ಟಿದ್ದಾರೆ.

ಸೋಮವಾರ ರಾತ್ರಿ ಅಡುಗೆ ಮಾಡುವಾಗ ಬೆಂಕಿ ತಗುಲಿತ್ತು. ಗಂಗಾವತಿಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT