ADVERTISEMENT

ಕೊಪ್ಪಳ ಪರೀಕ್ಷಾ ಕೇಂದ್ರ: ಶೌಚಾಲಯ ಸಿದ್ಧ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2020, 19:08 IST
Last Updated 3 ಮಾರ್ಚ್ 2020, 19:08 IST
ಬಳಕೆಗೆ ಸಿದ್ಧವಾದ ಶೌಚಾಲಯ
ಬಳಕೆಗೆ ಸಿದ್ಧವಾದ ಶೌಚಾಲಯ   

ಬೆಂಗಳೂರು:ಕೊಪ್ಪಳ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಬಾಲಕರು ಮತ್ತು ಬಾಲಕಿಯರಿಗೆ ಅಗತ್ಯವಿರುವಷ್ಟು ಶೌಚಾಲಯ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ.

‘1,100 ವಿದ್ಯಾರ್ಥಿಗಳಿಗೆ ಶೌಚಾಲಯ ಇಲ್ಲ’ ಎಂಬ ಸುದ್ದಿ ‘ಪ್ರಜಾವಾಣಿ’ಯಲ್ಲಿ ಮಂಗಳವಾರ ಪ್ರಕಟವಾಗಿತ್ತು. ತಕ್ಷಣ ಸ್ಪಂದಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌,ಕೊಪ್ಪಳದ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ಮಾತನಾಡಿ, ತಕ್ಷಣವೇ ಶೌಚಾಲಯ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದ್ದರು.

ಅದರಂತೆ ಲಭ್ಯ ಇರುವ ಶೌಚಾಲಯಗಳನ್ನುಸ್ವಚ್ಛಗೊಳಸಿ ನೀರಿನ ವ್ಯವಸ್ಥೆ ಮಾಡಲಾಯಿತು. ಬಾಲಕಿಯರಿಗೆ ಪ್ರೌಢಶಾಲಾ ವಿಭಾಗದಲ್ಲಿ ವ್ಯವಸ್ಥೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.