ADVERTISEMENT

‘ಕನಕ ಭವನ’ ಮಠಕ್ಕೆ ಹಸ್ತಾಂತರ

200 ಮಕ್ಕಳ ವಾಸ್ತವ್ಯಕ್ಕೆ ಅನುಕೂಲ: ವಸತಿ ಸಚಿವ ವಿ.ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2022, 19:45 IST
Last Updated 21 ಆಗಸ್ಟ್ 2022, 19:45 IST
ನಾಗರಬಾವಿ ವಾರ್ಡ್ ವ್ಯಾಪ್ತಿಯ ಚಂದ್ರಾ ಬಡಾವಣೆಯಲ್ಲಿ ನಿರ್ಮಿಸಿರುವ ಕನಕ ಭವನದ ಉದ್ಘಾಟನಾ ಸಮಾರಂಭದಲ್ಲಿ ಕಾಗಿನೆಲೆಮಠದ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಮಠದ ಪೀಠಾಧ್ಯಕ್ಷ ಈಶ್ವರಾನಂದಪುರಿ ಸ್ವಾಮೀಜಿ, ವಸತಿ ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಪಾಲಿಕೆ ಮಾಜಿ ಸದಸ್ಯ ಡಾ.ಎಸ್.ರಾಜು ಇದ್ದಾರೆ -  ಪ್ರಜಾವಾಣಿ ಚಿತ್ರ
ನಾಗರಬಾವಿ ವಾರ್ಡ್ ವ್ಯಾಪ್ತಿಯ ಚಂದ್ರಾ ಬಡಾವಣೆಯಲ್ಲಿ ನಿರ್ಮಿಸಿರುವ ಕನಕ ಭವನದ ಉದ್ಘಾಟನಾ ಸಮಾರಂಭದಲ್ಲಿ ಕಾಗಿನೆಲೆಮಠದ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಮಠದ ಪೀಠಾಧ್ಯಕ್ಷ ಈಶ್ವರಾನಂದಪುರಿ ಸ್ವಾಮೀಜಿ, ವಸತಿ ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಪಾಲಿಕೆ ಮಾಜಿ ಸದಸ್ಯ ಡಾ.ಎಸ್.ರಾಜು ಇದ್ದಾರೆ -  ಪ್ರಜಾವಾಣಿ ಚಿತ್ರ   

ಬೆಂಗಳೂರು:ನಾಗರಬಾವಿ ವಾರ್ಡ್‌ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಕನಕ ಭವನವನ್ನು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಲಾಯಿತು.

ಬಳಿಕ ಮಾತನಾಡಿದ ಸ್ವಾಮೀಜಿ, ‘ರಾಜಕಾರಣಿಗಳು ಮೈಕುಗಳ ಮುಂದೆ ಜಾತ್ಯತೀತವಾಗಿ ಬದುಕಬೇಕು ಎಂದು ಕಿವಿಮಾತು ಹೇಳುತ್ತಾರೆ. ಆದರೆ, ಚಾಲಕರು, ಸಹಾಯಕರ ನೇಮಕದ ವೇಳೆ ತಮ್ಮ ಜಾತಿಯವರನ್ನೇ ನೇಮಿಸಿಕೊಳ್ಳುತ್ತಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಹೊಸದುರ್ಗ ಕನಕಪೀಠದ ಈಶ್ವರಾನಂದಪುರಿ ಸ್ವಾಮೀಜಿ ಮಾತ
ನಾಡಿ, ‘ಅಪಪ್ರಚಾರಕ್ಕೆ ಕಿವಿಗೊಡುವುದು ಬೇಡ. ಉತ್ತರ ಕರ್ನಾಟಕದ ಸಾಕಷ್ಟು ಮಂದಿ ಈ ಭಾಗಕ್ಕೆ ಬಂದು ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆದುಕೊಳ್ಳುತ್ತಾರೆ. ಮುಂದೆ ಅವರೆಲ್ಲರೂ ಈ ಭವನದಲ್ಲಿ ವಾಸ್ತವ್ಯ ಮಾಡಬಹುದು’ ಎಂದು ಹೇಳಿದರು. ‘ಸಚಿವ ವಿ. ಸೋಮಣ್ಣ ಅವರು ಕುರುಬ ಸಮಾಜದ ಶ್ರೇಯೋಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಅವರ ಉಪಕಾರವನ್ನು ಸಮಾಜ ಮರೆಯುವುದಿಲ್ಲ. ನೀರು ಕೇಳಿದರೆ ಹಾಲು ಕೊಡುವ ಸಮಾಜ ನಮ್ಮದು’ ಎಂದು ಹೇಳಿದರು.

ADVERTISEMENT

ಸಚಿವ ವಿ.ಸೋಮಣ್ಣ ಮಾತನಾಡಿ, ‘ಈ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಅಂತೆಕಂತೆ
ಗಳನ್ನು ಬಿಟ್ಟು ಎಲ್ಲರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಕೆಲಸ ಮಾಡೋಣ.
ಕನಕ ಭವನವನ್ನು ಶ್ರೀಮಠಕ್ಕೆ
ಹಸ್ತಾಂತರ ಮಾಡಲಾಗುವುದು. ಇಲ್ಲಿ 150ರಿಂದ 200 ಮಕ್ಕಳು ರಾಜಧಾನಿಗೆ ಬಂದಾಗ ವಾಸ್ತವ್ಯಕ್ಕೆ ಅನುಕೂಲ ಆಗಲಿದೆ’ ಎಂದು ಹೇಳಿದರು. ಹಿಂದುಳಿದ ವರ್ಗಗಳ ಐಎಎಸ್‌, ಐಪಿಎಸ್‌ ಆಕಾಂಕ್ಷಿ
ಅಭ್ಯರ್ಥಿಗಳಿಗೆ ಈ ಭವನದಲ್ಲಿ
ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುವುದೆಂದು ಸೋಮಣ್ಣ ಭರವಸೆ ನೀಡಿದ್ದಾರೆ. ಅದು ಆದಷ್ಟು ಬೇಗ ಈಡೇರಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಸಚಿವ ಎಂ.ಟಿ.ಬಿ ನಾಗರಾಜ್‌ ಮಾತನಾಡಿ, ‘ಬಿಜೆಪಿ ಆಡಳಿತ ಅವಧಿಯಲ್ಲಿ ಭವನ ನಿರ್ಮಾಣಕ್ಕೆ ಅನುದಾನ ನೀಡಿದೆ. ಕನಕ ಭವನವು ಐಟಿ–ಬಿಟಿ ಮಾದರಿಯಲ್ಲಿ ನಿರ್ಮಾಣವಾಗಿದೆ’ ಎಂದರು.
‘ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ಆಡಳಿತ ಅವಧಿಯಲ್ಲಿ ಶಾಶ್ವತವಾಗಿ ಉಳಿಯುವ ಕೆಲಸ ಮಾಡಬೇಕು’ ಎಂದು ಕರೆ ನೀಡಿದರು. ಕಾಂಗ್ರೆಸ್‌ ಮುಖಂಡ ಎಚ್‌.ಎಂ.ರೇವಣ್ಣ ಮಾತನಾಡಿ, ‘ಇದು ಆತ್ಮಸಂತೋಷದ ಕಾರ್ಯಕ್ರಮ. ಗೋವಿಂದರಾಜ ನಗರದಲ್ಲಿ ಸುಸಜ್ಜಿತವಾದ ಭವನ ನಿರ್ಮಾಣವಾಗಿದೆ. ವಿ.ಸೋಮಣ್ಣ ಸಮಾಜಕ್ಕೆ ಬೇಕಾದ ಕೆಲಸಗಳನ್ನು ಮಾಡಿಕೊಟ್ಟಿದ್ದಾರೆ’ ಎಂದರು.
ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌, ಕನಕಶ್ರೀ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಟಿ.ಬಿ.ಬಳಗಾವಿ, ಪಿ.ಎನ್‌.ಕೃಷ್ಣಮೂರ್ತಿ, ಎಂ.ಪ್ರಕಾಶ್‌ ಹಾಜರಿದ್ದರು.

‘ಭಾರತ ಸಮೃದ್ಧ, ಶಕ್ತಿಶಾಲಿ ರಾಷ್ಟ್ರ’

ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ಭಾರತ ಸಮೃದ್ಧ, ಶಕ್ತಿಶಾಲಿ ಆಗುತ್ತಿದೆ. ಉಕ್ರೇನ್‌ ಹಾಗೂ ರಷ್ಯಾದ ಮಧ್ಯ ನಡೆದ ಯುದ್ಧದ ವೇಳೆ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಯಿತು. ಬೇರೆ ದೇಶಗಳು ಈ ಕೆಲಸ ಮಾಡಲಿಲ್ಲ. ಭಾರತದ ನಾಯಕತ್ವಕ್ಕೆ ಇಡೀ ಪ್ರಪಂಚವೇ ಗೌರವ ನೀಡುತ್ತಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.