ADVERTISEMENT

ಗ್ರಾಮ ವಿಕಾಸ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 4:36 IST
Last Updated 19 ಸೆಪ್ಟೆಂಬರ್ 2021, 4:36 IST
ಮುದಗಲ್ ಸಮೀಪದ ಮರಳಿ ಗ್ರಾಮದಲ್ಲಿ ಮೂಲ ಸೌಕರ್ಯ ಕಾಮಗಾರಿಗೆ ಶಾಸಕ ಡಿ.ಎಸ್.ಹೂಲಗೇರಿ ಚಾಲನೆ ನೀಡಿದರು
ಮುದಗಲ್ ಸಮೀಪದ ಮರಳಿ ಗ್ರಾಮದಲ್ಲಿ ಮೂಲ ಸೌಕರ್ಯ ಕಾಮಗಾರಿಗೆ ಶಾಸಕ ಡಿ.ಎಸ್.ಹೂಲಗೇರಿ ಚಾಲನೆ ನೀಡಿದರು   

ಮುದಗಲ್: ಸಮೀಪದ ಮರಳಿ ಗ್ರಾಮದಲ್ಲಿ 2017-18 ನೇ ಸಾಲಿನ ಗ್ರಾಮ ವಿಕಾಸ ಯೋಜನೆಯಡಿ ₹1 ಕೋಟಿ ವೆಚ್ಚದ ಸಿ.ಸಿ ರಸ್ತೆ , ಕುಡಿಯುವ ನೀರು, ಬೀದಿ ದೀಪ ಸೇರಿ ಮೂಲ ಸೌಕರ್ಯ ಕಾಮಗಾರಿಗೆ ಲಿಂಗಸಗೂರು ಶಾಸಕ ಡಿ.ಎಸ್.ಹೂಲಗೇರಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು,‘ಗ್ರಾಮದಲ್ಲಿ ಮೂಲ ಸೌಕರ್ಯ ಕೊರತೆಯಾಗದಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ. ಸ್ಥಳೀಯ ಪಂಚಾಯಿತಿ ಆಡಳಿತ ಮಂಡಳಿ ಸಹಕಾರ ಮುಖ್ಯವಾಗಿರುತ್ತದೆ. ನಾವೆಲ್ಲ ಸೇರಿ ಗ್ರಾಮಗಳನ್ನು ಅಭಿವೃದ್ಧಿ ಮಾಡೋಣ. ಗ್ರಾಮಸ್ಥರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾಹುದ್ ಸಾಬ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಪಾಟೀಲ ಹಾಗೂ ಬಸವರಾಜ ಜಲ್ಲಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.