ADVERTISEMENT

ರಾಮನಗರ: ದುಶ್ಚಟದಿಂದ ಉಜ್ವಲ ಭವಿಷ್ಯಕ್ಕೆ ಹಾನಿ

ತಂಬಾಕು ಸೇವನೆ ದುಷ್ಪರಿಣಾಮ: ವಿದ್ಯಾರ್ಥಿಗಳಿಗೆ ಅರಿವು ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 4:36 IST
Last Updated 22 ಸೆಪ್ಟೆಂಬರ್ 2021, 4:36 IST
ತಂಬಾಕು ಸೇವನೆಗಳಿಂದ ದೂರವಿರಲು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಶಿಕ್ಷಾಣಾಧಿಕಾರಿ ಬಿ.ಎಸ್. ಗಂಗಾಧರ್‌ ಉದ್ಘಾಟನೆ ಮಾಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವಿಷಕಂಠಪ್ಪ, ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ್ ಮುಖ್ಯ ಶಿಕ್ಷಕರಾದ ಪ್ರಕಾಶ್, ರಾಜ್ಯ ಆರೋಗ್ಯ ತರಬೇತಿ ಸಂಸ್ಥೆಯ ಬೋಧಕರಾದ ತನ್ವಿರ್, ಪುಂಡಲೀಕ ಲಕಾಡಿ, ಜಿಲ್ಲಾ ಸಂಯೋಜಕರಾದ ಡಾ. ಮಧು ಎಸ್. ಮಟ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿನಯ್ ಕುಮಾರ್ ಇದ್ದರು
ತಂಬಾಕು ಸೇವನೆಗಳಿಂದ ದೂರವಿರಲು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಶಿಕ್ಷಾಣಾಧಿಕಾರಿ ಬಿ.ಎಸ್. ಗಂಗಾಧರ್‌ ಉದ್ಘಾಟನೆ ಮಾಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವಿಷಕಂಠಪ್ಪ, ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ್ ಮುಖ್ಯ ಶಿಕ್ಷಕರಾದ ಪ್ರಕಾಶ್, ರಾಜ್ಯ ಆರೋಗ್ಯ ತರಬೇತಿ ಸಂಸ್ಥೆಯ ಬೋಧಕರಾದ ತನ್ವಿರ್, ಪುಂಡಲೀಕ ಲಕಾಡಿ, ಜಿಲ್ಲಾ ಸಂಯೋಜಕರಾದ ಡಾ. ಮಧು ಎಸ್. ಮಟ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿನಯ್ ಕುಮಾರ್ ಇದ್ದರು   

ಬಿಡದಿ: ಬೈರಮಂಗಲದ ವೃಷಭಾವತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ರಾಜ್ಯ ಆರೋಗ್ಯ ತರಬೇತಿ ಸಂಸ್ಥೆಯ ಕ್ಷೇತ್ರ ಆಧಾರಿತ ತರಬೇತಿ ಶಿಬಿರಾರ್ಥಿಗಳ ಸಹಯೋಗದೊಂದಿಗೆ ತಂಬಾಕು ಉತ್ಪನ್ನಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಶಿಕ್ಷಾಣಾಧಿಕಾರಿ ಬಿ.ಎಸ್. ಗಂಗಾಧರ್ ಉದ್ಘಾಟನೆ ಮಾಡಿದರು.

ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಆಧುನಿಕ ಜೀವನ ಶೈಲಿಯಿಂದ ತಂಬಾಕು ಉತ್ಪನ್ನಗಳ ಸೇವನೆ ಮಾಡುತ್ತಿದ್ದು ತಮ್ಮ ಉಜ್ವಲ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳ ಸೇವನೆಯಿಂದ ದೂರವಿರಲು ಸಲಹೆ ನೀಡಿದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವಿಷಕಂಠಪ್ಪ ಮಾತನಾಡಿ, ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ತೊಂದರೆ ತಿಳಿದುಕೊಂಡು ಜಾಗೃತಿ ಮೂಡಿಸುವ ಮೂಲಕ ತಂಬಾಕು ಮುಕ್ತ ಸಮಾಜ ನಿರ್ಮಿಸಲು ಸಲಹೆ ನೀಡಿದರು.

ADVERTISEMENT

ತಂಬಾಕು ಉತ್ಪನ್ನಗಳ ಸೇವನೆಯಿಂದ ಅಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು ಜೊತೆಗೆ ಇತರೆ ಆರೋಗ್ಯ ಸಮಸ್ಯೆಯಿಂದ ಪ್ರತಿ ವರ್ಷ ಸುಮಾರು 10 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ. ಕರ್ನಾಟಕದಲ್ಲಿ ವಯಸ್ಕರು ಶೇಕಡ 22.8ರಷ್ಟು ಸೇವನೆ ಮಾಡುತ್ತಿದ್ದು ಇದರಿಂದ ಯುವ ಶಕ್ತಿ ಕಡಿಮೆಯಾಗಿ ದೇಶದ ಪ್ರಗತಿಗೆ ಕಂಟಕವಾಗಬಹುದು. ಆದ್ದರಿಂದ ವಿದ್ಯಾರ್ಥಿಗಳು ಮಾಹಿತಿಯನ್ನು ತಿಳಿದುಕೊಂಡು ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ರಾಜೇಶ್ ಚಟ್ನಿಸ್ ಅವರು ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಬಾರದು, ಶಾಲಾ ಕಾಲೇಜು ಆವರಣದ ಸುತ್ತ-ಮುತ್ತ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ. ಇದರ ಬಗ್ಗೆ ಕಾಯ್ದೆ ಪ್ರಕಾರ ಕಾರ್ಯಾಚರಣೆ ತಂಡ ಬಿಡದಿ ಸುತ್ತಮುತ್ತಲಿನ ಅಂಗಡಿಗಳ ಮೇಳೆ ದಾಳಿ ಮಾಡಿ ದಂಡ ವಿಧಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ್ ಅವರು ತಿಳಿಸಿದರು.

ಮುಖ್ಯ ಶಿಕ್ಷಕರಾದ ಪ್ರಕಾಶ್, ರಾಜ್ಯ ಆರೋಗ್ಯ ತರಬೇತಿ ಸಂಸ್ಥೆಯ ಬೋಧಕರಾದ ತನ್ವಿರ್, ಪುಂಡಲೀಕ ಲಕಾಡಿ, ಜಿಲ್ಲಾ ಸಂಯೋಜಕರಾದ ಡಾ. ಮಧು ಎಸ್. ಮಟ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿನಯ್ ಕುಮಾರ್, ಹಾಗೂ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.