ADVERTISEMENT

ಗ್ರಾಮಗಳ ಅಭಿವೃದ್ಧಿಗೆ ಕೊರೊನಾ ಅಡ್ಡಿ: ಗೃಹ ಸಚಿವ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 4:16 IST
Last Updated 20 ಅಕ್ಟೋಬರ್ 2021, 4:16 IST
ತೀರ್ಥಹಳ್ಳಿ ತಾಲ್ಲೂಕು ನೊಣಬೂರಿನ ಸರ್ಕಾರಿ ಪ್ರೌಢಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು.
ತೀರ್ಥಹಳ್ಳಿ ತಾಲ್ಲೂಕು ನೊಣಬೂರಿನ ಸರ್ಕಾರಿ ಪ್ರೌಢಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು.   

ತೀರ್ಥಹಳ್ಳಿ: ‘ನಾನು ಹಳ್ಳಿಯಲ್ಲೇ ಹುಟ್ಟಿ ಬೆಳೆದಿದ್ದರಿಂದ ಅಲ್ಲಿನ ಸಮಸ್ಯೆ ಬಗ್ಗೆ ಅರಿವಿದೆ. ಆದರೆ, ಗ್ರಾಮಗಳ ಪ್ರಗತಿಗೆ ಕೊರೊನಾ ಅಡ್ಡಿಯಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ತೀರ್ಥಹಳ್ಳಿ ತಾಲ್ಲೂಕು ನೊಣಬೂರಿನ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಸಿಕ್ಕಂತಾಗಿದೆ. ಪ್ರತಿ ಗ್ರಾಮಗಳ ಅಭಿವೃದ್ಧಿ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಆದರೆ. ಕೊರೊನಾ ಕಾರಣದಿಂದಾಗಿ ಪ್ರಗತಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಪರಿಸ್ಥಿತಿ ತಿಳಿಯಾದ ಮೇಲೆ ಗ್ರಾಮಗಳ ಪ್ರಗತಿಗೆ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬಹುದೋ ಎಲ್ಲವನ್ನು ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ADVERTISEMENT

ನೋಣಬುರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಮತಿ, ಉಪಾಧ್ಯಕ್ಷ ಅರುಣ್, ಎಪಿಎಂಸಿ ನಿರ್ದೇಶಕಸಿ.ಬಿ.ಈಶ್ವರ್ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಲಕ್ಷ್ಮಿ, ಮಾಜಿ ಸದಸ್ಯರಾದ ಚಂದವಳ್ಳಿ ಸೋಮಶೇಖರ್, ಕುಕ್ಕೆ ಪ್ರಶಾಂತ್, ಶಾಲಾಭಿವೃದ್ಧಿಸಮಿತಿಯ ಅಧ್ಯಕ್ಷರಾದ ಮಹಮ್ಮದ್ ರಫಿ, ಶಾಲಾ ಮುಖ್ಯಶಿಕ್ಷಕ ಗಣಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.