ADVERTISEMENT

ಮದ್ಯ ಮಾರಾಟ ಮಳಿಗೆಗೆ ವಿರೋಧ: ಮುಂದುವರಿದ ಗ್ರಾಮಸ್ಥರ ಪ್ರತಿಭಟನೆ

ಶಾಲೆಗೆ ಹೋಗಲು ನಿರಾಕರಿಸುತ್ತಿರುವ ವಿದ್ಯಾರ್ಥಿನಿಯರು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 4:36 IST
Last Updated 21 ಸೆಪ್ಟೆಂಬರ್ 2021, 4:36 IST
ಸಾಗರ ತಾಲ್ಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಕೊಪ್ಪ ಗ್ರಾಮದಲ್ಲಿ ಮದ್ಯ ಮಾರಾಟ ಮಳಿಗೆಯನ್ನು ತೆರೆದಿರುವುದನ್ನು ವಿರೋಧಿಸಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು.
ಸಾಗರ ತಾಲ್ಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಕೊಪ್ಪ ಗ್ರಾಮದಲ್ಲಿ ಮದ್ಯ ಮಾರಾಟ ಮಳಿಗೆಯನ್ನು ತೆರೆದಿರುವುದನ್ನು ವಿರೋಧಿಸಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು.   

ಸಾಗರ: ತಾಲ್ಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಕೊಪ್ಪ ಗ್ರಾಮದಲ್ಲಿ ಎಂಎಸ್‌ಐಎಲ್ ಮದ್ಯ ಮಾರಾಟ ಮಳಿಗೆ ತೆರೆದಿರುವುದನ್ನು ವಿರೋಧಿಸಿ ಗ್ರಾಮಸ್ಥರು ನಡೆಸುತ್ತಿರುವ ಪ್ರತಿಭಟನೆ 8ನೇ ದಿನವೂ ಮುಂದುವರಿದಿದೆ.

ಗ್ರಾಮದಲ್ಲಿ ಆರಂಭವಾಗಿರುವ ಮದ್ಯ ಮಾರಾಟ ಮಳಿಗೆ ಮುಚ್ಚುವವರೆಗೂ ಶಾಲೆಗೆ ಹೋಗುವುದಿಲ್ಲ ಎಂದು ಗ್ರಾಮದ ವಿದ್ಯಾರ್ಥಿನಿಯರು ನಿರ್ಧರಿಸಿದ್ದಾರೆ. ಇದರಿಂದಾಗಿ ಕಳೆದ ಆರು ದಿನಗಳಿಂದ ಗ್ರಾಮದ ವಿದ್ಯಾರ್ಥಿನಿಯರು ಶಾಲೆಗಳ ತರಗತಿಗಳಿಗೆ ಹಾಜರಾಗಿಲ್ಲ.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಹಾಗೂ ಅಬಕಾರಿ ಇಲಾಖೆ ಹಿರಿಯ ಅಧಿಕಾರಿಗಳು, ‘ಮದ್ಯದಂಗಡಿ ಮುಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಗ್ರಾಮದ ವಿದ್ಯಾರ್ಥಿನಿಯರನ್ನು ಶಾಲೆಗೆ ಕಳುಹಿಸಿ’ ಎಂದು ಮನವಿ ಮಾಡಿದ್ದಾರೆ.

ADVERTISEMENT

ಆದರೆ ಗ್ರಾಮಸ್ಥರು ಮದ್ಯದಂಗಡಿ ಮುಚ್ಚುವವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ತಾಲ್ಲೂಕು ಪ್ರಗತಿಪರ ಯುವ ಒಕ್ಕೂಟದ ಅಧ್ಯಕ್ಷ ರಮೇಶ್ ಇ. ಕೆಳದಿ, ಕರ್ನಾಟಕ ರಾಜ್ಯ ರೈತ ಸಂಘದ ಗಿರೀಶ್ ಶಿರವಾಳ, ಹೊಯ್ಸಳ ಗಣಪತಿಯಪ್ಪ, ಗ್ರಾಮ ಸುಧಾರಣಾ ಸಮಿತಿ ಅಧ್ಯಕ್ಷ ಸುರೇಶ್ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.