ADVERTISEMENT

ಚಿಕ್ಕಬಳ್ಳಾಪುರ: ಅಂಗಡಿಗಳಿಗೆ ದಿಢೀರ್ ಬಾಗಿಲು– ಮಾಲೀಕರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 6:37 IST
Last Updated 22 ಏಪ್ರಿಲ್ 2021, 6:37 IST
   

ಚಿಕ್ಕಬಳ್ಳಾಪುರ: ನಗರದಲ್ಲಿ ಕಾರ್ಯಾಚರಣೆಗಿಳಿದಿರುವ ಪೊಲೀಸರು, ನಗರಸಭೆ ಮಾರ್ಷಲ್ ಗಳು ಚಿನ್ನ ಮತ್ತು ಬೆಳ್ಳಿ ಅಂಗಡಿ, ಬಟ್ಟೆ, ಟೀ ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಇದು ಅಂಗಡಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ.

ಬಿ ಬಿ ರಸ್ತೆಯಲ್ಲಿ ಪೊಲೀಸರು ಕಾರ್ಯಾಚರಣೆಗೆ ಇಳಿದರೆ, ಗಂಗಮ್ಮನ ಗುಡಿ ರಸ್ತೆ, ಬಜಾರ್ ರಸ್ತೆಯಲ್ಲಿ ನಗರಸಭೆ ಸಿಬ್ಬಂದಿ ಅಂಗಡಿಗಳ ಬಾಗಿಲು ಹಾಕಿಸಿದರು. ಹೀಗೆ, ಏಕಾಏಕಿ ಬಾಗಿಲು ಮುಚ್ಚಿಸಲು ಮುಂದಾಗುತ್ತಿದ್ದಂತೆ ವ್ಯಾಪಾರಿಗಳು ಪೊಲೀಸರು ಮತ್ತು ನಗರಸಭೆ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದರು.

ದಿನಸಿ ಅಂಗಡಿ, ಮೆಡಿಕಲ್ ಸ್ಟೋರ್, ಸಲೂನ್‌ಗಳು, ಹಾಲಿನ ಬೂತ್‌ಗಳನ್ನು ಬಂದ್ ಮಾಡಿಸುತ್ತಿಲ್ಲ. ಆಭರಣ ಮಳಿಗೆಗಳು, ಬಟ್ಟೆ ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದೇವೆ ಎಂದು ಕಾರ್ಯಾಚರಣೆ ನಡೆಸುತ್ತಿರುವ ನಗರಸಭೆ ಸಿಬ್ಬಂದಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.