ADVERTISEMENT

ರಾಜಕೀಯ ಪ್ರಾತಿನಿಧ್ಯಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ಮಾ.1ರಂದು ದೇವಾಂಗ ಸಂಘಟನಾ ಸಮಾವೇಶ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 2:44 IST
Last Updated 27 ಫೆಬ್ರುವರಿ 2021, 2:44 IST
ಸುದ್ದಿಗೋಷ್ಠಿಯಲ್ಲಿ ಸಮಿತಿ ಸಂಚಾಲಕ ಎಂ.ಜಿ.ಶ್ರೀನಿವಾಸ್ ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ಸಮಿತಿ ಸಂಚಾಲಕ ಎಂ.ಜಿ.ಶ್ರೀನಿವಾಸ್ ಮಾತನಾಡಿದರು   

ದೊಡ್ಡಬಳ್ಳಾಪುರ: ನಗರದಲ್ಲಿ ದೇವಾಂಗ ಸಮುದಾಯ ಬಹುಸಂಖ್ಯಾತರಾಗಿದ್ದರೂ ಸಹ ರಾಜಕೀಯ ಅಸ್ತಿತ್ವ ಪಡೆದುಕೊಳ್ಳುವಲ್ಲಿ ವಿಫಲವಾಗುತ್ತಿದೆ. ಈ ದಿಸೆಯಲ್ಲಿ ದೇವಾಂಗ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯಕ್ಕೆ ಸಂಕಲ್ಪ, ದೇವಾಂಗ ಸಮುದಾಯದ ಸಮಗ್ರ ಪ್ರಗತಿ ಹಾಗೂ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆಗೆ ಒತ್ತಾಯಿಸಿ ಮಾ.1ರಂದು ದೇವಾಂಗ ಸಂಘಟನಾ ಸಮಾವೇಶ ನಡೆಸಲಾಗುತ್ತಿದೆ ಎಂದು ದೇವಾಂಗ ಸಮನ್ವಯ ಸಮಿತಿ ಸಂಚಾಲಕ ಎಂ.ಜಿ.ಶ್ರೀನಿವಾಸ್ ಹೇಳಿದರು.

ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ದೇವಾಂಗ ಸಮನ್ವಯ ಸಮಿತಿ ವತಿಯಿಂದ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 52 ಕ್ಷೇತ್ರಗಳಲ್ಲಿ ದೇವಾಂಗ ಸಮು
ದಾಯದ ಪ್ರಭಾವವಿದೆ. 13 ಕ್ಷೇತ್ರಗಳಲ್ಲಿ ನಿರ್ಣಾಯಕವಾಗಿದೆ. ಇದರಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರವೂ ಸೇರಿದೆ. ದೊಡ್ಡ
ಬಳ್ಳಾಪುರದಲ್ಲಿ ಈವರೆಗಿನ ಶೇ75ರಷ್ಟು ಸಮೀಕ್ಷೆ ನಡೆಸಿರುವ ಪ್ರಕಾರ 35 ಸಾವಿರಕ್ಕೂ ಹೆಚ್ಚು ದೇವಾಂಗ ಸಮುದಾಯದವರಿದ್ದಾರೆ. 1932ರಿಂದ ಕೊಂಗಾಡಿಯಪ್ಪ ಅವರು ಪುರಸಭೆ ಪ್ರಥಮ ಅಧ್ಯಕ್ಷರಾಗಿದ್ದರಿಂದ ಮೊದಲು
ಗೊಂಡು ಸುಮಾರು 50 ವರ್ಷಗಳವರೆಗೆ ರಾಜಕೀಯ ವಲಯದಲ್ಲಿ ಹಾಗೂ ವಿವಿಧ ಸಹಕಾರ ಸಂಘಗಳಲ್ಲಿ ದೇವಾಂಗ ಸಮುದಾಯದ ಮುಖಂಡರ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ತಾಲ್ಲೂಕಿನ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿಕೊಂಡು ಬಂದಿದ್ದ ಸಮುದಾಯ ಹಲವು ನಾಯಕರನ್ನು ಬೆಳೆಯಲು ಪ್ರೋತ್ಸಾಹಿಸಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಭವಿಷ್ಯ ರೂಪಿಸಿ
ಕೊಳ್ಳುವಲ್ಲಿ ಹಿಂದೆ ಸರಿಯುವ ವಾತಾ
ವರಣ ಸೃಷ್ಟಿಯಾಗುತ್ತಿದೆ. ಸಮಾವೇಶ ಯಾವ ವ್ಯಕ್ತಿ ಅಥವಾ ಪಕ್ಷದ ಪರ, ವಿರೋಧ ಅಲ್ಲ. ಮುಂಬರುವ ದಿನ
ಗಳಲ್ಲಿ ಹಿಂದುಳಿದ ವರ್ಗದವರನ್ನು ಒಗ್ಗೂಡಿಸುವ ಚಿಂತನೆ ಇದೆ ಎಂದು ಹೇಳಿದರು.

ದೇವಾಂಗ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆಯಾಗಬೇಕು. ಸಮುದಾಯಕ್ಕೆ ರಾಜಕೀಯವಾಗಿ, ಆರ್ಥಿಕವಾಗಿ, ಶಿಕ್ಷಣಕ್ಕೆ ಪೂರಕವಾಗಿ ಮೀಸಲು ವ್ಯವಸ್ಥೆಯಾಗಬೇಕು. ಸ್ಥಳೀಯ ಸಂಸ್ಥೆ ಸೇರಿ ಆಯಕಟ್ಟಿನ ಹುದ್ದೆಗಳನ್ನು ಪಡೆಯಲು ಸಾಮಾಜಿಕ, ಆರ್ಥಿಕ, ಭಾಷೆ ಭಿನ್ನತೆಗಳನ್ನು ಮೀರಿ ಒಗ್ಗೂಡಬೇಕು ಎನ್ನುವ ಧ್ಯೇಯೋದ್ದೇಶ ಸಮಾವೇಶ ಹೊಂದಿದೆ ಎಂದರು. ಸಭೆಯಲ್ಲಿ ದೇವಾಂಗ ಮಂಡಲಿ ಅಧ್ಯಕ್ಷ ಕೆ.ಜಿ.ದಿನೇಶ್, ಗಾಯಿತ್ರಿ ಪೀಠ ಮಿತ್ರಬಳಗ ಅಧ್ಯಕ್ಷ ಪಿ.ಸಿ.ಲಕ್ಷ್ಮೀನಾರಾಯಣ್, ಆಂಧ್ರ ದೇವಾಂಗ ಸಂಕ್ಷೇಮ ಟ್ರಸ್ಟ್ ಕಾರ್ಯದರ್ಶಿ ಡಿ.ಎ.ಶ್ರೀನಾಥ್, ಟಿ.ಎಂಸಿ ಬ್ಯಾಂಕ್ ಅಧ್ಯಕ್ಷ ಕೆ.ಪಿ.ವಾಸುದೇವ್, ಆಂಧ್ರದೇವಾಂಗ ಸಂಘದ ನಿರ್ದೇಶಕ ಕೇಶವಮೂರ್ತಿ,ಸಮನ್ವ ಸಮಿತಿ ಸದಸ್ಯರಾದ ಯೋಗ
ನಟರಾಜ್, ಅಖಿಲೇಶ್,ಕೆರಮುಲು ಬದ್ರಿ,ಶಿವಾನಂದ್,ಎನ್.ಜಿ.ಕುಮಾರ್, ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.