ADVERTISEMENT

ತುಮಕೂರು: ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಶಿಕ್ಷಕ ಸಾವು

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 12:39 IST
Last Updated 2 ಆಗಸ್ಟ್ 2022, 12:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಂಗಳವಾರ ಶಿರಾ ತಾಲ್ಲೂಕಿನ ಚನ್ನನಕುಂಟೆ ಬಳಿ ಹಳ್ಳ ದಾಟುತ್ತಿದ್ದ ಶಿಕ್ಷಕ ಆರೀಫ್ ವುಲ್ಲಾ (55) ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ.

ದಾವೂದ್ ಪಾಳ್ಯ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಶಾಲೆ ಮುಗಿಸಿಕೊಂಡು ಶಿರಾಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ಸಮಯದಲ್ಲಿ ಘಟನೆ ನಡೆದಿದೆ.

ಶಿರಾದ ದೊಡ್ಡ ಕೆರೆಯ ಕೋಡಿ ನೀರು ಚನ್ನನಕುಂಟೆ ಹಳ್ಳದ ಮೂಲಕ ಹರಿದು ಹೋಗುತ್ತಿದ್ದು, ಅದನ್ನು ದಾಟಲು ಪ್ರಯತ್ನಿಸಿದಾಗ ನೀರಿನ ರಭಸಕ್ಕೆ ದ್ವಿಚಕ್ರ ವಾಹನ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆ. ಅವರನ್ನು ರಕ್ಷಿಸುವ ವೇಳೆಗೆ ಮೃತಪಟ್ಟಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.