ADVERTISEMENT

80 ಶಾಲೆಗಳಿಗೆ ನೂತನ ಕಟ್ಟಡ

ಶಾಸಕ ಮಸಾಲ ಜಯರಾಂ ಮಾಹಿತಿ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2021, 16:38 IST
Last Updated 5 ಸೆಪ್ಟೆಂಬರ್ 2021, 16:38 IST
ತುರುವೇಕೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು
ತುರುವೇಕೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು   

ತುರುವೇಕೆರೆ: ತಾಲ್ಲೂಕಿನಾದ್ಯಂತ 80 ಸರ್ಕಾರಿ ಶಾಲೆಗಳ ನೂತನಕಟ್ಟಡ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಮುಂಜೂರಾಗಿದೆ ಎಂದು ಶಾಸಕ ಮಸಾಲ ಜಯರಾಂ ತಿಳಿಸಿದರು.

ಪಟ್ಟಣದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಸಭಾಂಗಣ ದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವ ಯಾಧಿಕಾರಿಗಳ ಕಾರ್ಯಾಲಯಗಳ ಸಂಯುಕ್ತಾಶ್ರದಲ್ಲಿ ಭಾನುವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.

ಕೋವಿಡ್‍ನಿಂದಾಗಿ ಎರಡು ವರ್ಷ ಮಕ್ಕಳಿಗೆ ಸರಿಯಾದ ಶಿಕ್ಷಣ ಲಭಿಸಿಲ್ಲ. ಆನ್‍ಲೈನ್ ಶಿಕ್ಷಣದಲ್ಲಿ ಮಕ್ಕಳ ಬರವಣೆಗೆ ಸೇರಿದಂತೆ
ಹಲವು ವಿಷಯಗಳಲ್ಲಿ ಕುಂಠಿತಗೊಂಡಿದ್ದಾರೆ. ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಸರಿಯಾದ ಪಾಠ ನೀಡಲಾಗದೇ ಪರಿತ
ಪಿಸುವಂತಾಗಿದೆ. ಪೋಷಕರು ಸಹ ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಪಡುವಂತಾಗಿದೆ ಎಂದರು.

ADVERTISEMENT

ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಂಜನ್ ಕುಮಾರ್, ಸದಸ್ಯೆ ಶೀಲಾಶಿವಪ್ಪ, ಮುಖಂಡರಾದ ಶ್ರೀನಿವಾಸ್, ಕಾಳಂಜಿಹಳ್ಳಿ ಸೋಮಶೇಖರ್, ರೋಟರಿ ಕ್ಲಬ್ ಅಧ್ಯಕ್ಷ ಗ್ಯಾಸ್‍ ಪ್ರಭುಸ್ವಾಮಿ, ಲಯನ್ಸ್ ಕ್ಲಬ್ ಅಧ್ಯಕ್ಷ ಮಿಹಿರಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ
ಪರಮೇಶ್, ಬಿಇಒ ಸಿ.ರಂಗದಾಮಯ್ಯ, ಬಿಆರ್.ಸಿ ವಸಂತ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರಪ್ಪ, ಕಾಲೇಜು ಪ್ರಾಂಶುಪಾಲ ಶಿವಮೂರ್ತಿ, ಶಿಕ್ಷಕ ರಾಘವೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.