ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 22 ವರ್ಷ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 4:18 IST
Last Updated 3 ಸೆಪ್ಟೆಂಬರ್ 2021, 4:18 IST

ತುಮಕೂರು: ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ರಂಗಸ್ವಾಮಿ (45) ಮೇಲಿನ ಆರೋಪ ಸಾಬೀತಾಗಿದ್ದು, 22 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಪೊಕ್ಸೋ ನ್ಯಾಯಾಲಯ ಆದೇಶಿಸಿದೆ.

ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎನ್.ಕೃಷ್ಣಯ್ಯ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಪೊಕ್ಸೋ ಕಾಯ್ದೆಯಡಿ 20 ವರ್ಷಗಳು, ಐಪಿಸಿ ಅಡಿ 2 ವರ್ಷ ಹಾಗೂ ₹30 ಸಾವಿರ ದಂಡ ವಿಧಿಸಲಾಗಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರಿ ವಕೀಲರಾದ ಜಿ.ವಿ.ಜಾಯತ್ರಿ ರಾಜು ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT