ADVERTISEMENT

ದೇಶಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 2:54 IST
Last Updated 18 ಸೆಪ್ಟೆಂಬರ್ 2021, 2:54 IST
ತುಮಕೂರಿನಲ್ಲಿ ಶುಕ್ರವಾರ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅಭಯಹಸ್ತ ಆದಿಲಕ್ಷ್ಮಿ ಮಠದ ನೀಲಕಂಠಾಚಾರ್ಯ ಸ್ವಾಮೀಜಿ, ಸಮುದಾಯದ ಮುಖಂಡ ಕೆ.ವಿ.ಕೃಷ್ಣಮೂರ್ತಿ, ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ನಾಗರಾಜಾಚಾರ್, ಪಾಲಿಕೆ ಸದಸ್ಯರಾದ ಎಸ್.ಎಲ್.ನರಸಿಂಹಸ್ವಾಮಿ, ಮಹೇಶ್, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಾನಂದ, ಕಾಳಿಕಾಂಬ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ವಿ.ಗಂಗಾಧರಾಚಾರ್ ಇತರರು ಉಪಸ್ಥಿತರಿದ್ದರು
ತುಮಕೂರಿನಲ್ಲಿ ಶುಕ್ರವಾರ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅಭಯಹಸ್ತ ಆದಿಲಕ್ಷ್ಮಿ ಮಠದ ನೀಲಕಂಠಾಚಾರ್ಯ ಸ್ವಾಮೀಜಿ, ಸಮುದಾಯದ ಮುಖಂಡ ಕೆ.ವಿ.ಕೃಷ್ಣಮೂರ್ತಿ, ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ನಾಗರಾಜಾಚಾರ್, ಪಾಲಿಕೆ ಸದಸ್ಯರಾದ ಎಸ್.ಎಲ್.ನರಸಿಂಹಸ್ವಾಮಿ, ಮಹೇಶ್, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಾನಂದ, ಕಾಳಿಕಾಂಬ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ವಿ.ಗಂಗಾಧರಾಚಾರ್ ಇತರರು ಉಪಸ್ಥಿತರಿದ್ದರು   

ತುಮಕೂರು: ವಿಶ್ವಕರ್ಮ ಸಮುದಾ
ಯವು ಹಿಂದೂ ಧರ್ಮಕ್ಕೆ ನೀಡಿ
ರುವ ಕೊಡುಗೆ ಅಪಾರ. ಸನಾತನ ಕಾಲ
ದಿಂದಲೂ ಶಿಲ್ಪಿಗಳು, ಸ್ವರ್ಣಕಾರರು ಸೇರಿದಂತೆ ವಿಶ್ವಕರ್ಮ ಸಮುದಾಯ
ದವರು ಪಂಚ ಕಸುಬುಗಳ ನೈಪುಣ್ಯತೆ ಮೂಲಕ ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದುಅಭಯಹಸ್ತ ಆದಿಲಕ್ಷ್ಮಿ ಸಂಸ್ಥಾನದ ಪೀಠಾಧ್ಯಕ್ಷ ನೀಲಕಂಠಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ವಿಶ್ವಕರ್ಮ ಸೇವಾ ಸಮಿತಿಯ ಸಹ
ಯೋಗದಲ್ಲಿ ಶುಕ್ರವಾರ ನಗರದ ಗುಬ್ಬಿ
ವೀರಣ್ಣ ರಂಗಮಂದಿರದಲ್ಲಿ ಏರ್ಪಡಿ
ಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ
ದಲ್ಲಿ ಆಶೀರ್ವಚನ ನೀಡಿದರು.

ವಿಶ್ವಕರ್ಮ ಸಮುದಾಯದ ಅಭಿವೃದ್ಧಿಯ ಚಿಂತನೆಗಳು ನಡೆಯಬೇಕು. ಸಾವಿರಾರು ವರ್ಷಗಳ ಇತಿಹಾಸವಿರುವ ವಿಶ್ವಕರ್ಮ ಪೂಜಾ ಮಹೋತ್ಸವವೆಂದರೆ ತುಮಕೂರು ಭಾಗದ ಸಮುದಾಯಕ್ಕೆ ದಸರಾ ಹಬ್ಬ
ವಿದ್ದಂತೆ. ದಾಸ ಸಂತತಿಯ ಶ್ರೇಷ್ಠರು, ಸನಾತನ ಧರ್ಮದ ಹಲವಾರು ಸಂತರು,
ಶರಣ ಶ್ರೇಷ್ಠರಾದ ಬಸವಣ್ಣ, ಕಲ್ಲಯ್ಯ
ಇತರರು ವಿಶ್ವಕರ್ಮ ಸಮುದಾಯಕ್ಕೆ ತಮ್ಮದೇ ಆದ ಕೊಡುಗೆ ನೀಡಿ
ದ್ದಾರೆ. ಅವರ ಸಂದೇಶಗಳು, ಮಾರ್ಗದ
ರ್ಶನಗಳು ನಮ್ಮ ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು ಎಂದರು.

ADVERTISEMENT

ವಿಶ್ವಕರ್ಮ ಸಮಾಜದ ಮುಖಂಡ, ನಿವೃತ್ತ ಉಪನ್ಯಾಸಕ ಕೆ.ವಿ.ಕೃಷ್ಣಮೂರ್ತಿ, ‘ಜಾತ್ಯತೀತ ರಾಷ್ಟ್ರವಾದ ಭಾರತದಲ್ಲಿ ಎಲ್ಲರೂ ಒಂದೇ ಎಂಬ ಭಾವನೆದೊಂದಿಗೆ ಪಂಚ ಕರ್ಮಗಳನ್ನುಅನುಸರಿಸಿಕೊಂಡು ವಿಶ್ವಕರ್ಮ ಸಮುದಾಯವು ಸಮಾಜಕ್ಕೆ ಮಾದರಿಯಾಗಿದೆ’ ಎಂದರು.

ವಿಶ್ವಕರ್ಮ ಸಮುದಾಯದ ಉಪಜಾತಿಗಳಲ್ಲಿ ಹಿಂದುಳಿದ ಮಕ್ಕಳನ್ನುಶಿಕ್ಷಣವಂತರನ್ನಾಗಿ ಮಾಡಿ ಆಧುನಿಕತೆಗೆ ತಕ್ಕಂತೆ ತಾಂತ್ರಿಕವಾಗಿ ಮುಂದುವರೆಯಲು ದಾರಿ ಮಾಡಿಕೊಡಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ನಾಗರಾಜಾಚಾರ್, ‘ಪ್ರತಿವರ್ಷ ಹಬ್ಬದಂತೆ ನಡೆಯುತ್ತಿದ್ದ ವಿಶ್ವಕರ್ಮ ಯಜ್ಞ ಮಹೋತ್ಸವವನ್ನು ಕೋವಿಡ್‌ನಿಂದಾಗಿ ಕಳೆದ ಎರಡು ವರ್ಷಗಳಿಂದ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಸದಸ್ಯರಾದ ಎಸ್.ಎಲ್.ನರಸಿಂಹಸ್ವಾಮಿ, ಮಹೇಶ್, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಾನಂದ, ಕಾಳಿಕಾಂಬ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ವಿ.ಗಂಗಾಧರಾಚಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಿ.ವಿ.ಸುರೇಶ್ ಕುಮಾರ್, ಭಾಗ್ಯ, ಬಿ.ವಿ.ಲಕ್ಷ್ಮಣಾಚಾರ್, ಶಂಕರಾಚಾರ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.