
ಪ್ರಜಾವಾಣಿ ವಾರ್ತೆಉಡುಪಿ: ಜಿಲ್ಲೆಯಲ್ಲಿ ಗುರುವಾರ 111 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಉಡುಪಿಯ 63, ಕುಂದಾಪುರದ 31, ಕಾರ್ಕಳದ 17 ಮಂದಿಗೆ ಸೋಂಕು ತಗುಲಿದೆ. ಸೋಂಕಿತರಲ್ಲಿ 59 ಪುರುಷರು ಹಾಗೂ 52 ಮಹಿಳೆಯರಿದ್ದು, 34 ಮಂದಿಯಲ್ಲಿ ಸೋಂಕಿನ ಲಕ್ಷಣಗಳಿದ್ದು 77 ಮಂದಿಯಲ್ಲಿ ಲಕ್ಷಣಗಳು ಇಲ್ಲ.
ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 25,651 ಇದ್ದು, 526 ಸಕ್ರಿಯ ಸೋಂಕಿತರು ಇದ್ದಾರೆ. 25651 ಮಂದಿ ಗುಣಮುಖರಾಗಿದ್ದು, 192 ಮಂದಿ ಮೃತಪಟ್ಟಿದ್ದಾರೆ. ಇದುವರೆಗೂ 1,52,003 ಮಂದಿ ಕೋವಿಡ್ ಮೊದಲ ಡೋಸ್ ಲಸಿಕೆ ಪಡೆದಿದ್ದರೆ, 24940 ಮಂದಿ 2ನೇ ಡೋಸ್ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.